Advertisement

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

03:06 PM Sep 18, 2024 | Team Udayavani |

ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಪೋಟಗೊಂಡ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ.

Advertisement

ಕಾಮರೆಡ್ಡಿ ಜಿಲ್ಲಾ ಕೇಂದ್ರದ ಬ್ರಿಲಿಯಂಟ್ ಗ್ರಾಮರ್ ಶಾಲೆಗೆ ಸೇರಿದ ಬಸ್ ಬುಧವಾರ ಬೆಳಿಗ್ಗೆ ಸುಮಾರು ಐವತ್ತು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ ಅಷ್ಟರಲ್ಲಿ ಭಯಭೀತರಾದ ವಿದ್ಯಾರ್ಥಿಗಳು ಬಸ್ಸಿನಿಂದ ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ ಇದಾದ ಬಳಿಕ ದಟ್ಟ ಹೊಗೆ ಕಾಣಿಸಿಕೊಂಡು ಹೊತ್ತಿ ಉರಿದಿದೆ, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಸಾಮಾನ್ಯವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ಕಾಲಕಾಲಕ್ಕೆ ತಪಾಸಣೆ ನಡೆಸಿ ಫಿಟ್ ಆಗಿದ್ದರೆ ಮಾತ್ರ ಓಡಿಸಬೇಕು ಎಂದು ಆರ್ ಟಿಎ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಈ ವಿಚಾರದಲ್ಲಿ ನಿರ್ಲಕ್ಷ್ಯ ತಾಳಿದ್ದು, ವಾಹನ ತಪಾಸಣೆ ನಡೆಸುವಲ್ಲಿ ಸಿಬ್ಬಂದಿಗಳು ವಿಫಲವಾಗಿದ್ದು ಇದರಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?

Advertisement

Udayavani is now on Telegram. Click here to join our channel and stay updated with the latest news.