Advertisement

Mahendragarh ಪಲ್ಟಿಯಾದ ಶಾಲಾ ಬಸ್; ಐವರು ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

11:03 AM Apr 11, 2024 | Team Udayavani |

ಹೊಸದಿಲ್ಲಿ: ವಿದ್ಯಾರ್ಥಿಗಳಿದ್ದ ಸ್ಕೂಲ್ ಬಸ್ ಅಪಘಾತಕ್ಕೆ ಸಿಲುಕಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.

Advertisement

ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಹಿಂದಕ್ಕೆ ಹಾಕುವ ಪ್ರಯತ್ನದಲ್ಲಿ ಈ ಘಟನೆ ನಡೆದಿದೆ. ಬಸ್ ಪಲ್ಟಿಯಾಗಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ. ಶಾಲಾ ಬಸ್ ಚಾಲಕನಿಗೂ ಗಾಯಗಳಾಗಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next