Advertisement

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿ: ಶಿಕ್ಷಕ ಸ್ಥಳದಲ್ಲೇ ಸಾವು

10:04 AM Dec 26, 2019 | Mithun PG |

ಶಿವಮೊಗ್ಗ: ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿ, ಚಾಲಕ,ನಿರ್ವಾಹಕ ಗಂಭಿರ ಗಾಯಗೊಂಡ  ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳದಲ್ಲಿ ನಡೆದಿದೆ.

Advertisement

ಹರಿಕೃಷ್ಣ(45) ಮೃತ ಶಿಕ್ಷಕ. ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು ವಾಪಾಸ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ಮಾರಶೆಟ್ಟಹಳ್ಳಿ ಗ್ರಾಮದ ಮಂಜುನಾಥ ಪ್ರೌಢ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದರು. ಮಾರಶೆಟ್ಟಿಹಳ್ಳಿಯಲ್ಲಿ ಹಾಗೂ ಅರಬಿಳಚಿ ಗ್ರಾಮದಲ್ಲಿ ಕೆಲ ವಿದ್ಯಾರ್ಥಿಗಳನ್ನು ಇಳಿಸಿ , ನಂತರ ಬಸ್ಸು ವಾಪಾಸ್ ತೆರಳುತ್ತಿತ್ತು. ಈ ವೇಳೆ ಕಲ್ಲಿಹಾಳ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next