ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಡಿದೆ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು,
Advertisement
ದಿನಾಂಕ 05/07/ 2022ರಂದು ಅಂದರೆ ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಈ ಆದೇಶ ನೀಡಿದ್ದು, ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿಯಿದ್ದು ರಜೆಯ ಸಮಯದಲ್ಲೂ ಮಕ್ಕಳು ತಮ್ಮ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಳ್ಳಲು ತಿಳಿಸಲಾಗಿದೆ.