Advertisement
ಹುಸಿ ಬಾಂಬ್ ಕರೆ ಪಡೆದಿದ್ದ ನೀವ್ ಅಕಾಡೆಮಿಗೆ ಭೇಟಿ ನೀಡಿದ ಬಳಿಕ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಒಂದು ವರ್ಷದ ಹಿಂದೆಯೂ ಈ ರೀತಿ ಆಗಿತ್ತು. ಶಾಲೆಗಳಿಗೆ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೇ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಮೇಲ್ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೊಲೀಸ್ ಆಯುಕ್ತರು ಇದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಿದ್ದಾರೆ. ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದರು.
Related Articles
Advertisement
ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಬಳಿಕ ಈ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಎಚ್ಚರಿಕೆಯಿಂದ ಇರಬೇಕು. ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿ¨ªಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದು ಹೇಳಿದರು.