Advertisement
ಈ ವಿಚಾರವಾಗಿ ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.ಅರ್ಜಿದಾರರ ಪರ ನ್ಯಾಯವಾದಿ ಎಂ. ಪಿ. ಶ್ರೀಕಾಂತ್ ವಾದ ಮಂಡಿಸಿ, 2020-21ನೇ ಸಾಲಿನಲ್ಲಿ ಶುಲ್ಕ ಸಂಗ್ರಹಕ್ಕೆ ಅನುಮತಿ ಕೋರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಂದ ಕನಿಷ್ಠ ಶೇ. 50ರಷ್ಟು ಶುಲ್ಕ ಸಂಗ್ರಹಕ್ಕೆ ಅನುಮತಿ ನೀಡುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿಕೊಂಡರು.