Advertisement
ಶುಲ್ಕವನ್ನು ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ದೂರುಗಳು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೆಲವು ಖಾಸಗಿ ಶಾಲೆಯವರು ಶಾಲಾ ಶುಲ್ಕವನ್ನು ವಸೂಲು ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪೋಷಕರಿಂದ ದೂರವಾಣಿ ಮೂಲಕ ದೂರುಗಳು ಬರುತ್ತಿವೆ. ಶಾಲಾ ಶುಲ್ಕ ವಸೂಲಾತಿ ಕುರಿತಂತೆ ಪೋಷಕರಿಗೆ ಒತ್ತಡ ಹೇರುವಂತಿಲ್ಲ. ಮುಂದಿನ ದಿನಗಳಲ್ಲಿ ಪೋಷಕರು ಖುದ್ದಾಗಿ ಬಂದು ಶಾಲೆಯ ಹೆಸರು ಸಹಿತ ಲಿಖೀತ ದೂರು ನೀಡಿದ್ದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ಶಾಲೆಗಳ ವಿರುದ್ಧ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.