Advertisement

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

11:55 PM Jul 03, 2024 | Team Udayavani |

ಶಿರ್ವ: ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ (16) ಜು. 3ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಂದೆ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Advertisement

ಹೃದಯ ಸಂಬಂಧಿ ಕಾಯಿಲೆ ಇದ್ದ ಅವರು ಮಂಗಳವಾರ ಶಾಲೆಗೆ ಬಂದಿದ್ದರು. ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಹೆತ್ತವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next