Advertisement

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

08:44 AM Jul 26, 2024 | Team Udayavani |

ಬಾಗಲಕೋಟೆ: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುಧೋಳ, ರಬಕವಿ- ಬನಹಟ್ಟಿ, ಜಮಖಂಡಿ, ತೇರದಾಳ್ ತಾಲೂಕುಗಳ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.

Advertisement

ಮುಧೋಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಧೋಳ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಉಪವಿಭಾಗಾಧಿಕಾರಿ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ ಎಂದು ಬಿಇಒ ಎಸ್.ಎಂ. ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಬಕವಿ-ಬನಹಟ್ಟಿ: ನಿರಂತರವಾಗಿ ಮಳೆ ಬರುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಇಂದು (ಜುಲೈ 26) ರಂದು ಜಮಖಂಡಿ, ರಬಕವಿ ಬನಹಟ್ಟಿ, ತೇರದಾಳ್ ತಾಲೂಕುಗಳ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಬಿಇಓ ಅಶೋಕ ಬಸಣ್ಣವರ ತಿಳಿಸಿದ್ದಾರೆ.

ಇದನ್ನೂ ಓದಿ: Holiday: ಬಿರುಗಾಳಿ ಮಳೆ… ಇಂದು (ಜುಲೈ 26) ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

Advertisement

Udayavani is now on Telegram. Click here to join our channel and stay updated with the latest news.

Next