Advertisement

ಮಲೆನಾಡಲ್ಲಿ ಮಳೆಯ ಅಬ್ಬರ: ಶಿವಮೊಗ್ಗ ಜಿಲ್ಲೆಯ ಮೂರೂ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

09:10 AM Jul 26, 2024 | sudhir |

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಮೂರೂ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು( ಜುಲೈ 26) ರಂದು ರಜೆ ಘೋಷಣೆ ಮಾಡಲಾಗಿದೆ.

Advertisement

ಭಾರಿ ಗಾಳಿ ಮಳೆ ಸುರಿಯುತ್ತಿರುವುದರಿಂದ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಪದವಿ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಮೂರು ತಾಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Advertisement

Udayavani is now on Telegram. Click here to join our channel and stay updated with the latest news.

Next