ಮಂಗಳೂರು/ಉಡುಪಿ: ಬೇಸಗೆ ರಜೆ ಪೂರ್ಣಗೊಂಡಿದ್ದು, ಇಂದು (ಸೋಮವಾರ) ಶಾಲೆಗಳು ಆರಂಭಗೊಳ್ಳುತ್ತಿವೆ.
ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ತಳಿರು ತೋರಣಗಳಿಂದ ಶೃಂಗರಿಸಲಾಗಿದೆ. ಹಬ್ಬದ ವಾತಾವರಣ ಸೃಷ್ಟಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯೂ ನಿರ್ದೇಶನ ನೀಡಿದೆ.
ರಾಜ್ಯ ಪಠ್ಯಕ್ರಮದ ಸರಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶನಿವಾರ ಹಾಗೂ ರವಿವಾರ ತರಗತಿ ಕೊಠಡಿ, ಶಾಲಾ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು. ಬಿಸಿಯೂಟ, ಕ್ಷೀರ ಭಾಗ್ಯದ ಹಾಲು ಇತ್ಯಾದಿ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸರಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಹಲವು ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ವಾಹನ ವ್ಯವಸ್ಥೆ ಮಾಡಲಾಗಿದೆ.
Related Articles