Advertisement

ಶಾಲಾರಂಭ: ಇಲಾಖೆ ಆಯುಕ್ತರಿಂದ ವರದಿ ಸಲ್ಲಿಕೆ

01:12 AM Nov 10, 2020 | mahesh |

ಬೆಂಗಳೂರು: ಶಾಲಾರಂಭಕ್ಕೆ ಸಂಬಂಧಿಸಿ ವಿವಿಧ ಇಲಾಖೆ, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಣ ತಜ್ಞರಿಂದ ಪಡೆದ ಮಾಹಿತಿ ಆಧರಿಸಿ ಸಿದ್ಧಪಡಿಸಿರುವ ವರದಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೋಮವಾರ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲ್ಲಿಸಿದ್ದಾರೆ. ಪ್ರೌಢಶಾಲೆ ಮತ್ತು ಪಿಯು ತರಗತಿಗಳನ್ನು ಆರಂಭಿಸಬಹುದು ಎಂಬುದನ್ನು ವರದಿಯಲ್ಲಿ ಉಲ್ಲೇಖೀಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Advertisement

ನ.17ರಿಂದ ಕಾಲೇಜು ಆರಂಭಕ್ಕೆ ಸಂಬಂಧಿಸಿ ಸರಕಾರ ಸೋಮವಾರ ಎಸ್‌ಒಪಿ ಬಿಡುಗಡೆ ಮಾಡಿರುವ ಬೆನ್ನಲ್ಲೇ ಶಾಲಾರಂಭದ ವರದಿಯನ್ನು ಸಲ್ಲಿಸಲಾಗಿದ್ದು, ಸರಕಾರದಿಂದ ಯಾವುದೇ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ. ಮುಖ್ಯಮಂತ್ರಿಗಳ ಕೈಗೆ ವರದಿ ತಲುಪಿದ ಬಳಿಕ ಈ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಶಾಲಾರಂಭಕ್ಕೆ ಸಂಬಂಧಿಸಿ ವಿವಿಧ ವಲಯ
ಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದಲ್ಲಿ ವರದಿಯನ್ನು ಸಿದ್ಧಪಡಿಸಿ, ಇಲಾ ಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿ, ಶಿಕ್ಷಣ ಸಚಿವರಿಗೆ ಸಲ್ಲಿಸಲಿದ್ದಾರೆ. ಸಚಿವರು ವರದಿಯನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಲಿದ್ದಾರೆ ಮತ್ತು ಶಾಲಾರಂಭಕ್ಕೆ ಸಂಬಂಧಿಸಿ ಸರಕಾರದಿಂದಲೇ ನಿರ್ಧಾರ ಪ್ರಕಟವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಅನುºಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣ ಇಲಾಖೆಯ ಆಯುಕ್ತರು ಒಂದು ವಾರದಿಂದ ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ ಸಹಿತ ವಿವಿಧ ಇಲಾಖೆ, ಶಿಕ್ಷಣ ತಜ್ಞರು, ಖಾಸಗಿ ಶಾಲಾಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕ್ರೋಡೀಕೃತ ವರದಿ ಸಿದ್ಧಪಡಿಸಿದ್ದಾರೆ. ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಮುಖ್ಯವಾಗಿರುವುದರಿಂದ ಅವರಿಗೆ ತರಗತಿಗಳನ್ನು ಆರಂಭಿಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಮೊದಲ ಹಂತದಲ್ಲಿ 9ರಿಂದ 12ನೇ ತರಗತಿಗಳನ್ನು ಪ್ರಾರಂಭಿಸಬಹುದು ಎಂದು ವರದಿಯಲ್ಲಿ ಪ್ರಸ್ತಾವಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಸಂಜೆ ಡಿಪ್ಲೊಮಾ: ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಸಂಜೆ ಪಾಲಿಟೆಕ್ನಿಕ್‌ ಕಾಲೇಜುಗಳ 2020-21ನೇ ಸಾಲಿನ ಪ್ರಥಮ ಸೆಮಿಸ್ಟರ್‌ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಜೆ ಡಿಪ್ಲೊಮಾ ಕೋರ್ಸ್‌ನಲ್ಲಿ ಉಳಿದಿರುವ ಸೀಟುಗಳ ಭರ್ತಿಗಾಗಿ ವಿಶೇಷ ಪ್ರವೇಶಾನುಮತಿಯನ್ನು ಪ್ರಾಂಶುಪಾಲರು ಕೋರಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರವೇಶ ಪ್ರಕ್ರಿಯೆ ನಡೆಸಲು ಅನುಮತಿ ಕಲ್ಪಿಸಲಾಗಿದೆ. ಈ ಹಿನ್ನೆಯಲ್ಲಿ ಸಂಜೆ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಪಡೆದು, ನ.14ರೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಮೊದಲು ಬಂದ ವಿದ್ಯಾರ್ಥಿಗಳಿಗೆ ಸೀಟು ನೀಡಿ, ಆಫ್ಲೈನ್‌ ವ್ಯವಸ್ಥೆಯಲ್ಲೇ ಸೀಟು ಹಂಚಿಕೆ ಮಾಡಲು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next