Advertisement

ನಾಲ್ಕೈದು ದಿನದಲ್ಲಿ ಶಾಲಾರಂಭದ ಬಗ್ಗೆ ನಿರ್ಧಾರ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

01:05 PM Nov 04, 2020 | sudhir |

ಬೆಂಗಳೂರು : ಶಾಲಾರಂಭಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ, ಎಸ್ಡಿಎಂಸಿ ಹಾಗೂ ಖಾಸಗಿ ಶಾಲಾಡಳಿತ ಮಂಡಳಿಗಳ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿಗಳಿಗೆ ವರದಿ ಅಲ್ಲಿಸಿ, ನಾಲ್ಕೈದು ದಿನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

Advertisement

ಶಿಕ್ಷಣ ಇಲಾಖೆ ಆಯುಕ್ತರು, ನಿರ್ದೇಶಕರು, ಪ್ರಧಾನ ಕಾರ್ಯದರ್ಶಿಗಳ ಜತೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿದ ಅವರು, ಶಾಲಾರಂಭದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಶಾಲಾರಂಭದ ಕುರಿತು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಬೇರೆ ಬೇರೆ ರಾಜ್ಯದಲ್ಲಿ ಶಾಲಾರಂಭ, ಅಲ್ಲಿನ ಕೊರೊನಾ ಸ್ಥಿತಿಗತಿ ಅವಲೋಕನ ಮಾಡಿದ್ದೇವೆ. ಇಲಾಖೆ ಆಯುಕ್ತರು ಮುಂದಿನ ಎರಡು ದಿನ ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ, ಆರೋಗ್ಯ ಇಲಾಖೆ, ರಾಜ್ಯದ ಎಲ್ಲ ತಾಲೂಕುಗಳ ಎಸ್ಡಿಎಂಸಿ ಪ್ರತಿನಿಧಿಗಳ ಜತೆ ಚರ್ಚೆ ಮಾಡಿ, ಅದರ ಆಧಾರದ ಮೇಲೆ ವರದಿ ಸಲ್ಲಿಸಲಿದ್ದಾರೆ. ಮೊರಾರ್ಜಿ ದೇಸಾಯಿ ಶಾಲೆಗಳು, ಆಶ್ರಮ ಶಾಲೆಗಳ ಬಗ್ಗೆ ಸಂಬಂಧಪಟ್ಟವರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ನಂತರ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ, ಪರಿಸ್ಥಿತಿ ವಿವರಿಸಿ ಮುಂದಿನ ಕ್ರಮ ಘೋಷಣೆ ಮಾಡಲಿದ್ದೇವೆ ಎಂದರು.

ಪ್ರಾಥಮಿಕ, ಪ್ರೌಢ ಹಾಗೂ ಪಿಯು ಶಿಕ್ಷಕ ಸಂಘದ ಪದಾಧಿಕಾರಿಗಳು. ಜಿಪಂ ಅಧ್ಯಕ್ಷ ನರಸಿಂಹ ಮೂರ್ತಿ ಇದ್ದರು.

ನೀತಿ ಸಂಹಿತೆ ಮುಗಿದ ನಂತರ ವರ್ಗಾವಣೆ
ಚುನಾವಣಾ ನೀತಿ ಸಂಹಿತಿ ಮುಗಿದ ನಂತರವೇ ಶಾಲಾ ಶಿಕ್ಷಕರ ಹಾಗೂ ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸುತ್ತೇವೆ.

ಬಹಳ ದಿನಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಬೇರೆ ಬೇರೆ ಕಾರಣದಿಂದ ಮುಂದೆ ಹೋಗುತಿತ್ತು. ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ. ಇವತ್ತು ಎಲ್ಲವೂ ಚರ್ಚೆ ಮಾಡಿದ್ದೇವೆ. ಚುನಾವಣೆ ನೀತಿ ಸಂಹಿತೆ ಅವಧಿ ಮುಗಿದ ತಕ್ಷಣ ವರ್ಗಾವಣೆ ಪ್ರಕ್ರಿಯೆ ಆರಂಭವಾಗುತ್ತದೆ. ವರ್ಗಾವಣೆ ಸಂಬಂಧಿಸಿದ ಪೂರ್ವಭಾವಿ ಕ್ರಮ ತೆಗೆದುಕೊಂಡಿದ್ದೇವೆ. ಪ್ರೌಢ, ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪಿಯು ಉಪನ್ಯಾಸಕರ ವರ್ಗಾವಣೆಗೂ ಮೊದಲು, ಪ್ರಾಂಶುಪಾಲರ ಹುದ್ದೆಗೆ ಪದೋನ್ನತಿ ಮುಗಿಸಿ, ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next