Advertisement
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ ಸೇರಿ ಒಟ್ಟು 3,127 ಶಾಲೆಗಳಿವೆ. ಶಾಲಾರಂಭದ ಹಿನ್ನೆಲೆಯಲ್ಲಿ ಸೋಮವಾರ ಎಲ್ಲ ಶಾಲೆಗಳು ತೆರೆದುಕೊಂಡಿದ್ದವು. ಶಿಕ್ಷಕರು ಹಾಗೂ ಶಾಲಾ ಸಿಬಂದಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಪೂರ್ವ ತಯಾರಿ ಆರಂಭಿಸಿದ್ದಾರೆ. ಮಂಗಳವಾರವೂ ತಯಾರಿ ಪ್ರಕ್ರಿಯೆ ನಡೆಯಲಿದೆ.
Related Articles
Advertisement
ಸಮವಸ್ತ್ರ-ಪಠ್ಯ ಪುಸ್ತಕ ಸಿದ್ಧಸೋಮವಾರ ಉಭಯ ಜಿಲ್ಲಾದ್ಯಂತ ಎಲ್ಲ ಶಾಲೆಗಳು ಆರಂಭವಾಗಿದ್ದು, ಮೇ 31ರಂದು ಮಕ್ಕಳನ್ನು ಬರಮಾಡಿಕೊಳ್ಳಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಈ ಬಾರಿ ಶಾಲಾರಂಭಕ್ಕೆ ಮೊದಲೇ ಮಕ್ಕಳ ಸಮವಸ್ತ್ರ ಪೂರೈಕೆಯಾಗಿದೆ. ಜಿಲ್ಲೆಯ ಎಲ್ಲ ಶಾಲೆಗಳಿಗೆ ಈಗಾಗಲೇ ಸಮವಸ್ತ್ರ ಹಾಗೂ ಪಠ್ಯಪುಸ್ತಕ ರವಾನೆಯೂ ಆಗಿದೆ. ಮೇ 31ರಂದು ವಿತರಣೆ ನಡೆಯಲಿದೆ. ನೀರಿನ ವ್ಯವಸ್ಥೆಗೆ ನಿರ್ದೇಶನ
ದ.ಕ. ಡಿಡಿಪಿಐ ದಯಾನಂದ ನಾಯಕ್ ಅವರು “ಉದಯವಾಣಿ’ ಜತೆಗೆ ಮಾತನಾಡಿ, ಜಿಲ್ಲೆಯ ಯಾವ ಶಾಲೆಗೂ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೂಡುಬಿದಿರೆ ವ್ಯಾಪ್ತಿಯಲ್ಲಿ 15 ಹಾಗೂ ಬೆಳ್ತಂಗಡಿಯಲ್ಲಿ 24 ಶಾಲೆಗಳಿಗೆ ನೀರಿನ ಸಮಸ್ಯೆ ಬಗ್ಗೆ ಅಲ್ಲಿನ ಬಿಇಒಗಳು ತಿಳಿಸಿದ್ದಾರೆ. ಅಲ್ಲಿಗೆ ಸ್ಥಳೀಯ ಗ್ರಾ.ಪಂ. ನೆರವಿನಿಂದ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.