Advertisement
ಉಡುಪಿ ನಗರದ ಕೆಲವು ಪ್ರೌಢಶಾಲೆಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಶಾಲೆಯ ಕ್ಯಾಂಪಸ್ ಒಳಗೆ ಹಿಜಾಬ್, ಬುರ್ಖಾ ಧರಿಸಿ ಬಂದಿದ್ದರೂ, ತರಗತಿ ಒಳಗೆ ಬುರ್ಖಾ ಹಾಗೂ ಹಿಜಾಬ್ ತೆಗೆದಿಟ್ಟು ಹೋಗಿದ್ದಾರೆ. ಸಮವಸ್ತ್ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಯಾವುದೇ ಅಹಿತಕರ ಘಟನೆ ನಡೆಯ ದಂತೆ ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಪ್ರೌಢ ಶಾಲಾವರಣ ದಲ್ಲಿ ಸಾರ್ವಜನಿಕರು ಗುಂಪು ಸೇರಲು ಅವಕಾಶ ನೀಡಿರಲಿಲ್ಲ.
ಉಡುಪಿ ಸರಕಾರಿ ಬಾಲಕಿಯರ ಪ್ರೌಢ ಶಾಲೆಗೆ ಪ್ರಭಾರ ಡಿಡಿಪಿಐ ಗೋವಿಂಡ ಮಡಿವಾಳ ಅವರು ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದರು. ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Related Articles
Advertisement
ಎಸ್‌ಡಿಎಂಸಿ ಸಭೆಬಹುತೇಕ ಪ್ರೌಢಶಾಲೆಗಳಲ್ಲಿ ಸೋಮವಾರ ಎಸ್‌ಡಿಎಂಸಿ ಸದಸ್ಯರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸಮವಸ್ತ್ರ ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ. ಅಲ್ಲದೆ, ಹೈಕೋರ್ಟ್ ನೀಡಿರುವ ಮಧ್ಯಾಂತರ ತೀರ್ಪು, ಮುಂದೆ ಬರೆಲಿರುವ ಅಂತಿಮ ತೀರ್ಪನ್ನು ಪಾಲಿಸುವ ಬಗ್ಗೆ ನಿರ್ಧರಿಸಿದ್ದಾರೆ. ಬಿಗಿ ಪೊಲೀಸ್ ಭದ್ರತೆ
ಪ್ರೌಢಶಾಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬ ಸದುದ್ದೇಶದಿಂದ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಪೊಲೀಸ್ ಸಿಬಂದಿ ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆಯ ಆವರಣದಲ್ಲೇ ಇದ್ದು, ಸಮವಸ್ತ್ರ ನಿಯಮ ಪಾಲನೆ ಮತ್ತು ನಿಯಮ ಉಲ್ಲಂಘನೆ ಆಗದೇ ಇರುವ ಬಗ್ಗೆ ನಿಗಾ ವಹಿಸಿದ್ದಾರೆ.