Advertisement

ಜುಲೈ ತಿಂಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತರಗತಿ ಆರಂಭ

07:59 PM Jun 02, 2020 | sudhir |

ಬೆಂಗಳೂರು ; ಜುಲೈ ತಿಂಗಳಿನಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತರಗತಿಗಳನ್ನು ಹಂತ ಹಂತವಾಗಿ ಆರಂಭಿಸಲು ಶಿಕ್ಷಣ ಸಚಿವರು ಆದೇಶ ನೀಡಿದ್ದಾರೆ.

Advertisement

ಜೂನ್ 1 ರಂದು ಮಾನ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಅದ್ಯಕ್ಷತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ , ಪ್ರೌಢ ಶಿಕ್ಷಣ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಇತರೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆಯನ್ನು ನಡೆಸಲಾಗಿದ್ದು ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.

5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ‌ ಶಾಲೆಗಳು ಅಲ್ಲಿನ ಕಛೇರಿ ಸಿಬ್ಬಂದಿ ಸಂಬಂಧಿಸಿದ ಶಾಲೆಗಳಲ್ಲಿ ಕರ್ತವ್ಯಕ್ಕೆ‌ ಹಾಜರಾಗಿ, 8.6.2020ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಿದ್ದಾರೆ.

ಶೈಕ್ಷಣಿಕ ತಯಾರಿಗೆ ಜೂನ್‌ ತಿಂಗಳನ್ನು ಸದ್ಬಳಕೆ ಮಾಡಿಕೊಂಡು ಮುಂದಿನ ದಿನಗಳ ಪರಿಸ್ಥಿತಿಯ ಆಧಾರದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ಕಾಲಕಾಲಿಕ ನಿರ್ದೇಶನದಂತೆ ಕ್ರಮ ವಹಿಸಲು ಸೂಚಿಸಿದ್ದಾರೆ.

Advertisement

8.6.2020ರಿಂದ ಖಾಸಗಿ ಅನುದಾನರಹಿತ ಶಾಲಾ ಕಛೇರಿಗಳ ಪ್ರಾರಂಭಕ್ಕೂ ಅನುಮತಿಸಿ ಆದೇಶ ಹೊರಡಿಸಲಾಗಿದ್ದು, ಪೋಷಕರ‌ ಅಭಿಪ್ರಾಯವನ್ನು 15.06.2020ರ ಒಳಗೆ SATs ನಲ್ಲಿ‌ದಾಖಲಿಸಲು ಸೂಚಿಸಲಾಗಿದೆ.

ಸರಕಾರದ ಮಾರ್ಗಸೂಚಿಯಂತೆ :
ಜುಲೈ 1 ರಿಂದ : 4ನೇ ತರಗತಿಯಿಂದ 7 ನೇ ತರಗತಿಯವರೆಗೆ
ಜುಲೈ 15 ರಿಂದ : 1ನೇ ತರಗತಿಯಿಂದ 3ನೇ ತರಗತಿ ಹಾಗೂ 8ನೇ ತರಗತಿಯಿಂದ 10ನೇ ತರಗತಿಯವರೆಗೆ
ಜುಲೈ 20 ರಿಂದ : ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next