Advertisement
ಸದ್ಯ ಈಗಾಗಲೇ ಘೋಷಿಸಿರುವಂತೆ ಜ. 1ಕ್ಕೆ ಎಸೆಸೆಲ್ಸಿ ಹಾಗೂ ಪಿಯು ತರಗತಿಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಆದರೆ ಈ ನಡುವೆಯೇ ಸಲಹಾ ಸಮಿತಿಯು ಎರಡನೇ ಅಲೆ ಅಪಾಯ ಕುರಿತು ಎಚ್ಚರಿಸಿದೆ. ವೈರಸ್ ರೂಪಾಂತರದ ಆತಂಕವೂ ಇರು ವುದರಿಂದ ಶಾಲಾರಂಭದ ನಿರ್ಣಯ ವನ್ನು ಸರಕಾರ ಪುನರ್ ಪರಿಶೀಲಿಸಲಿದೆ ಎನ್ನಲಾಗಿದೆ.
ಈ ಮಧ್ಯೆ, ಜ. 1ರಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6ರಿಂದ 9ನೇ ತರಗತಿಗೆ ವಿದ್ಯಾಗಮ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಶಾಲಾರಂಭ ಇನ್ನಷ್ಟು ದಿನ ಮುಂದೂಡಿಕೆಯಾಗುವ ಸಾಧ್ಯತೆ ಇಲ್ಲದಿಲ್ಲ. ಆದರೆ ವಿದ್ಯಾಗಮ ಜ.1ರಿಂದ ಆರಂಭವಾಗಲಿದೆ. ಶಾಲಾರಂಭ ಮುಂದೂಡಲ್ಪಟ್ಟರೆ ಎಸೆಸೆಲ್ಸಿಗೂ ವಿದ್ಯಾಗಮ ನಡೆಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Related Articles
ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ)ಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿವರೆಗೆ ನಡೆಸುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಕೊರೊನಾ ಪರಿಸ್ಥಿತಿ ಆಧರಿಸಿ ಮತ್ತು ವಿಸ್ತೃತ ಸಮಾಲೋಚನೆಯ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಎಂದಿದ್ದಾರೆ.
Advertisement
ಮಕ್ಕಳ ಹಿತದೃಷ್ಟಿಯಿಂದ ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಶಾಲಾರಂಭವು ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ.-ಸುರೇಶ್ ಕುಮಾರ್, ಶಿಕ್ಷಣ ಸಚಿವ