Advertisement

ಶಾಲಾ ಕಾಲೇಜು ಪುನರಾರಂಭ: ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಚಿವ ಸುರೇಶ್ ಕುಮಾರ್

10:09 AM Jul 08, 2020 | Mithun PG |

ಬೆಂಗಳೂರು: ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Advertisement

ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದರು.

ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ತಮ್ಮ ಫೇಸ್ ಬುಕ್ ಖಾತೆ ಮೂಲಕ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next