Advertisement

ಲಾಕ್‌ ಡೌನ್‌ನಲ್ಲಿ ವಿದ್ಯಾರ್ಥಿಗಳ ಶೂ, ಸಾಕ್ಸ್, ಸ್ವೆಟರ್ ನಲ್ಲಿ ಬಿಬಿಎಂಪಿ ಗೋಲ್‌ಮಾಲ್!

07:43 PM Jul 17, 2021 | keerthan |

ಬೆಂಗಳೂರು: 2020-21ನೇ ಸಾಲಿನಲ್ಲಿ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಬೆಲ್ಟ್, ಸ್ವೆಟರ್‌ಗಳನ್ನು ನೀಡದೆ ಬೋಗಸ್‌ ಬಿಲ್‌ ಮಾಡಿ ಬಿಬಿಎಂಪಿಗೆ ಆರ್ಥಿಕ ನಷ್ಟ ಉಂಟು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯುಕ್ತ ಗೌರವ್ ಗುಪ್ತ ಅವರಿಗೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ರಾಜ್ಯಾಧ್ಯಕ್ಷ ಡಾ.ಸಿ.ಎಸ್.ರಘು ದೂರು ನೀಡಿದ್ದಾರೆ.

Advertisement

ಆಯುಕ್ತರನ್ನು ಶನಿವಾರ ಭೇಟಿಯಾದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸಿ.ಎಸ್‌. ರಘು, “ಈ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೋಲಾಗಿರುವ ಸಾರ್ವಜನಿಕರ ತೆರಿಗೆ ಹಣವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

“2020-21ನೇ ಸಾಲಿನ ಪಾಲಿಕೆ ಆಯವ್ಯಯದಲ್ಲಿ ಶಾಲಾ ಕಾಲೇಜುಗಳಿಗೆ ಅವಶ್ಯವಿರುವ ಮೂಲ ಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ತುರ್ತಾಗಿ ಒದಗಿಸಲು ಕೆಹೆಚ್‌ಡಿಸಿ ಹಾಗೂ ಎಂಎಸ್‌ಐಎಲ್‌ ಸಂಸ್ಥೆ ವತಿಯಿಂದ ಅಗತ್ಯ ಸಲಕರಣೆಗಳನ್ನು ಖರೀದಿಸಿರುವುದಾಗಿ ಹೇಳಲಾಗಿದೆ.  2021ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳೀಗೆ ಶೂ, ಸಾಕ್ಸ್‌, ಬೆಲ್ಟ್‌ ವಿತರಿಸಲು ಪಾಲಿಕೆಯಿಂದ 1.72 ಕೋಟಿ ರೂ.ಪಾವತಿ ಆಗಿದೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಇವುಗಳನ್ನು ವಿತರಿಸುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗುತ್ತದೆ,” ಎಂದು ರಘು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ರೈತರನ್ನು ಕಂಗಾಲು ಮಾಡಿದ ಅಂತರಗಂಗೆ : ಶಾಶ್ವತ ಪರಿಹಾರಕ್ಕಾಗಿ ಹೂಳೆತ್ತುವಂತೆ ಆಗ್ರಹ

“ಅದೇ ರೀತಿ 400 ರೂಪಾಯಿ ಬೆಲೆಯ ಸ್ವೆಟರ್‌ ಅನ್ನು 1400 ರೂಪಾಯಿ ಎಂದು ನಮೂದಿಸಿ ಬಿಲ್‌ ಮಾಡಲಾಗಿದೆ. ಈ ಕುರಿತು ಆರ್‌ಟಿಐ ಮೂಲಕ ಮಾಹಿತಿ ಪಡೆದಿದ್ದೇವೆ. ಬಿಬಿಎಂಪಿಯಲ್ಲಿ ಬಿಲ್‌ ಕ್ಲಿಯರ್‌ ಆಗುವುದೇ ಕಷ್ಟ. ಆದರೆ, ಈ ಖರೀದಿ ಪ್ರಕರಣಗಳಲ್ಲಿ ದಿಢೀರ್ ಬಿಲ್ ಪಾವತಿಯಾಗಿದ್ದು, ಇದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಲಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಒದಗಿಸಿ” ಎಂದು ಅವರು ಮನವಿ ಮಾಡಿದರು.

Advertisement

ತಾವು ನೀಡಿದ ದೂರಿನ ಕುರಿತಂತೆ ಆಯುಕ್ತ ಗೌರವ್ ಗುಪ್ತ ಅವರು ಪೂರಕವಾಗಿ ಸ್ಪಂದಿಸಿದ್ದು, ಪ್ರಕರಣದ ಕುರಿತು ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಡಾ.ಸಿ.ಎಸ್‌. ರಘು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next