Advertisement
ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನಿಂದ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ.
Related Articles
Advertisement
ಅಲ್ಲದೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ.
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ.
ಮತ್ತೊಂದು ಪ್ರಮುಖ ಅಂಶ ಅಂದ್ರೆ ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತೆರೆಯಲು ಅವಕಾಶ ನೀಡಿಲ್ಲ.ಹಾಗೂ 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.