Advertisement
ಅನುಭವ ಆಗುತ್ತಿದೆಯೋ ಗೊತ್ತಿಲ್ಲ. ತಿಂಗಳಾನುಗಟ್ಟಲೆ ಮನೆಗಳಲ್ಲೇ ಇದ್ದು ಚಡಪಡಿಸುತ್ತಿದ್ದ ವಿದ್ಯಾರ್ಥಿಗಳು ಈಗ ಮೆಲ್ಲಮೆಲ್ಲನೆ ಹೊರಗಡಿಯಿಡುವ ಕಾಲ. ಮೊಬೈಲ್, ಲ್ಯಾಪ್‌ಟಾಪ್ ನೋಡಿಕೊಂಡು ಪಾಠ ಹೇಳುತ್ತಿದ್ದ ಮೇಷ್ಟ್ರುಗಳು ಮತ್ತೆ ವಿದ್ಯಾರ್ಥಿಗಳನ್ನೇ ಕಂಡು ಬದುಕಿದೆಯಾ ಬಡಜೀವವೇ ಎಂದು ನಿರಾಳವಾಗುವ ಕಾಲ. ಹಾಗೆಂದು ಎರಡೂ ಕಡೆಯವರ ಸಂಕಷ್ಟಗಳು ಮುಗಿದವೆಂದಲ್ಲ. ಈ ತರಗತಿ ಭಾಗ್ಯ ಯೋಜನೆಯ ಫಲಾನುಭವಿಗಳುಕೊನೇ ವರ್ಷದಲ್ಲಿ ಓದುತ್ತಿರುವ ಡಿಗ್ರಿ ಮತ್ತು ಯುನಿವರ್ಸಿಟಿ ವಿದ್ಯಾರ್ಥಿಗಳು ಮತ್ತವರಿಗೆ ಪಾಠ ಮಾಡುತ್ತಿರುವ ಅಧ್ಯಾಪಕರು ಮಾತ್ರ. ಅದರಲ್ಲೂ ವಿದ್ಯಾರ್ಥಿಗಳಿಗೆ ಇದುಕಡ್ಡಾಯವೇನಲ್ಲ.
Related Articles
Advertisement
ಯಾವ ಕಡೆ ಕತ್ತು ತಿರುಗಿಸಿದರೂ ಕಳೆದ ಆನ್ ಲೈನ್‌ಕ್ಲಾಸಲ್ಲಿ ಮೇಷ್ಟ್ರು ಏನು ಹೇಳಿದ್ದಾರೆ ಅನ್ನೋದು ನೆನಪಾಗಲೊಲ್ಲದು. ಅಂತೂಅವರಿಗೊಂದೆರಡು ದಿನ ಸುದೀರ್ಘ ಪೀಠಿಕೆ ಹಾಕಿ ಮತ್ತೆ ಸಿಲೆಬಸ್ಸಿಗೆ ಬರಬೇಕು. ಇಷ್ಟಾದಮೇಲೂ ತರಗತಿಯಲ್ಲಿರುವುದು ಶೇ. 20-30ರಷ್ಟು ವಿದ್ಯಾರ್ಥಿಗಳು. ಉಳಿದವರನ್ನುಬಿಟ್ಟುಬಿಡುವ ಹಾಗಿಲ್ಲ. ಅವರಿಗೂ ಪಾಠ ತಲುಪಿಸಬೇಕು. ಒಂದೋ ತರಗತಿಯಲ್ಲಿ ಮಾಡಿದ್ದನ್ನು ಮತ್ತೂಮ್ಮೆ ಆನ್‌ಲೈನ್ ಮಾಡಬೇಕು. ಅಥವಾ ತರಗತಿಯಲ್ಲಿ ಮಾಡುತ್ತಿ ರುವುದೇ ನೇರ ಪ್ರಸಾರ ಆಗಬೇಕು. ಅಂದರೆ ಪಾಠ ಮಾಡುತ್ತಿರುವ ಅಧ್ಯಾಪಕ ಎದುರಿಗೆ ಮೊಬೈಲ್‌ಅಥವಾ ಲ್ಯಾಪ್‌ಟಾಪ್ ಇಟ್ಟುಕೊಳ್ಳಬೇಕು. ಆನ್‌ಲೈನ್‌ಗೆ ಬಂದಿರುವ ವಿದ್ಯಾರ್ಥಿಗಳು ಪಾಠ ಕೇಳಿಸಿಕೊಳ್ಳಬೇಕೆಂದರೆ ಅಧ್ಯಾಪಕ ನಿಂತಲ್ಲೇ ನಿಂತಿರಬೇಕು. ನಿಂತಲ್ಲೇ ನಿಂತರೆ ಅನೇಕ ಅಧ್ಯಾಪಕರಿಗೆ ಮಾತೇ ಹೊರಡದು. ಅವರಿಗೆ ಬೋರ್ಡು ಬಳಕೆ ಮಾಡಿ ಅಭ್ಯಾಸ. ಪ್ರತ್ಯಕ್ಷತರಗತಿಗೆ ಹಾಜರಾಗಿರುವವರಿಗೂ ನಿಶ್ಚಲ ಮೇಷ್ಟ್ರ ಪಾಠ ಕೇಳುವುದಕ್ಕೆ ಪರಮ ಸಂಕಷ್ಟ. ಅಧ್ಯಾಪಕ ಬೋರ್ಡನ್ನೂ ಬಳಕೆ ಮಾಡುವುದು ಆನ್‌ಲೈನ್‌ವಿದ್ಯಾರ್ಥಿಗಳಿಗೆಕಾಣಿಸುವಂತೆ ಮಾಡ ಬಹುದು.ಅದಕ್ಕೆ ಬೇರೆ ವ್ಯವಸ್ಥೆ ಬೇಕು. ಅಷ್ಟೊಂದು ವ್ಯವಸ್ಥೆ ನಮ್ಮ ಕಾಲೇಜುಗಳಲ್ಲಿದೆಯಾ? ಕಡೇ ಪಕ್ಷ ತರಗತಿಯಲ್ಲಿ ಪಾಠ ಮಾಡಿದ್ದರ ಆಡಿಯೋವನ್ನಾದರೂ ರೆಕಾರ್ಡ್ ಮಾಡಿ ಮನೆಯಲ್ಲಿಕುಳಿತಿರುವ ಭಾಗಶಃ ವಿದ್ಯಾರ್ಥಿಗಳಿಗೆ ವಾಟ್ಸ್ಯಾಪ್ ಮೂಲಕ ತಲುಪಿಸಬಹುದು.
ಕಾಲರ್ ಮೈಕ್ ಅನ್ನು ಮೊಬೈಲಿಗೆ ತಗುಲಿಸಿ ಈ ಕೆಲಸ ಮಾಡಬಹುದು. ನಡುವೆ ಫೋನ್ ಬಾರದಂತೆ ಅಧ್ಯಾಪಕ ಮುನ್ನೆಚ್ಚರಿಕೆ ವಹಿಸಬೇಕು. ಈ ಮಧ್ಯೆ ಅಕಸ್ಮಾತ್ ಯಾರಿಂದಾದರೂ ಕಾಲ್ ಬಂದರೆ ಅಲ್ಲಿಯವರೆಗಿನ ರೆಕಾರ್ಡಿಂಗ್‌ಢಮಾರ್. ಈ ಎಲ್ಲ ಸರ್ಕಸ್ ಮಾಡುವ ತಾಂತ್ರಿಕತೆಗಳ ಪರಿಚಯ ಎಲ್ಲ ಅಧ್ಯಾಪಕರಿಗೂ ಇದೆಯೇ? ಅದು ಬೇರೆ ಮಾತು.
ಅಂತೂ ದಿನೇದಿನೇ ವಿದ್ಯಾರ್ಥಿಗಳ ಮತ್ತವರ ಪೋಷಕರ ಆತಂಕ ನಿಧಾನವಾಗಿ ಕರಗುತ್ತಿರುವುದು ಸದ್ಯದ ಆಶಾವಾದ. ತಮ್ಮ ಕ್ಲಾಸ್ ಮೇಟುಗಳು ಧೈರ್ಯ ಮಾಡಿರುವುದನ್ನು ನೋಡಿ ಉಳಿದಿರುವವರಿಗೂ ಉತ್ಸಾಹ ಮೂಡುತ್ತಿದೆ. ತರಗತಿಗಳಲ್ಲಿ ಅಟೆಂಡೆನ್ಸ್ ದಿನೇದಿನೇ ಏರುತ್ತಿದೆ. ಎಲ್ಲರೂ ಬಂದು ಹಾಜರ್ ಸಾರ್ ಎನ್ನುವವರೆಗೆ ಮೇಷ್ಟ್ರ ಪರದಾಟ ಮಾತ್ರ ತಪ್ಪಿದ್ದಲ್ಲ.
-ಸಿಬಂತಿ ಪದ್ಮನಾಭ ಕೆ.ವಿ.
ಸಹಾಯಕ ಪ್ರಾಧ್ಯಾಪಕ, ತುಮಕೂರು ವಿವಿ