Advertisement

ಚಿಕ್ಕಮಗಳೂರು ಜಿಲ್ಲೆಯ ಮೂವರು ಶಿಕ್ಷಕರಿಗೆ ಕೋವಿಡ್ ಪಾಸಿಟಿವ್: 7 ದಿನಗಳ ಕಾಲ ಶಾಲೆ ಬಂದ್

08:22 PM Jan 04, 2021 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಒರ್ವ ಶಿಕ್ಷಕನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಶಾಲೆಯನ್ನು ಬಂದ್ ಮಾಡಲಾಗಿದೆ.

Advertisement

ಕಳಸ ಹೋಬಳಿ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳಸ ಪಟ್ಟಣದ ಜೆಎಂಇ ಶಾಲೆಯಲ್ಲಿ 15 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 13ಮಂದಿಗೆ ಕೊರೊನಾ ನೆಗೆಟಿವ್ ಬಂದಿದೆ.

ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು ಓರ್ವ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶಿಕ್ಷಕರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ಶಾಲೆಗಳನ್ನು 7 ದಿನಗಳ ಅವಧಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:ತಿರುಪತಿ : ತನ್ನ ಮಗಳಿಗೆ ಹೆಮ್ಮೆಯಿಂದ ಸಲ್ಯೂಟ್ ಮಾಡಿದ ಸರ್ಕಲ್ ಇನ್ಸ್​ಪೆಕ್ಟರ್

Advertisement

ಶಾಲೆ ಕಾಲೇಜು ಆರಂಭಕ್ಕೆ ಸರ್ಕಾರ ಜ.1ರಿಂದ ಆದೇಶ ನೀಡಿದ್ದು, ಶಾಲೆ ಆರಂಭವಾಗಿ ಎರಡು ದಿನ ಕಳೆಯುವಷ್ಟರಲ್ಲಿ ಜಿಲ್ಲೆಯ ಮೂರು ಮಂದಿ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳಸ ಜೆಎಂಇ ಶಾಲೆ ಶಿಕ್ಷಕರು ಕೊರೊನಾ ರಿಪೋರ್ಟ್ ಕೈ ಸೇರದಿದ್ದರು ಶಾಲೆಗೆ ಆಗಮಿಸಿದ್ದು ಎಂದು ಹೇಳಲಾಗುತ್ತಿದೆ.

“ಜಿಲ್ಲೆಯ ಕಳಸ ಪಟ್ಟಣದ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲ್ಲೂಕು ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಮುಂಜಾಗೃತಕ್ರಮವಾಗಿ ಎರಡು ಶಾಲೆಗಳಲ್ಲಿ 7ದಿನಗಳ ಮಟ್ಟಿಗೆ ರಜೆ ಘೋಷಣೆ ಮಾಡಲಾಗಿದೆ.”
-ಬಿ.ವಿ.ಮಲ್ಲೇಶಪ್ಪ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ.

Advertisement

Udayavani is now on Telegram. Click here to join our channel and stay updated with the latest news.

Next