Advertisement

ಸರ್ಕಾರಿ ಶಾಲೆ ಶೌಚಾಲಯದ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

02:26 PM Dec 19, 2018 | Team Udayavani |

ಮುಳಬಾಗಿಲು: ತಾಲೂಕಿನ ಗುಣಗಂಟಿ ಪಾಳ್ಯ ಸರ್ಕಲ್‌ನಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ಶೌಚಾಲಯದ ಗೋಡೆ ಕುಸಿದು ಬಿದ್ದು  ಅವಶೇಷಗಳಡಿಯಲ್ಲಿ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘ‌ಟನೆ ಬುಧವಾರ ನಡೆದಿದೆ. 

Advertisement

ಮೃತ ದುರ್‌ದೈವಿ ವಿದ್ಯಾರ್ಥಿನಿ ಬಿಸ್ನಹಳ್ಳಿಯ ಜೋತ್ಸ್ನಾಎನ್ನುವವಳಾಗಿದ್ದು , 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. 

ವಸತಿ ಶಾಲೆಯನ್ನು ಖಾಸಗಿ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು, ಕಟ್ಟಡ ಅಷ್ಟೊಂದು ಗಟ್ಟಿಯಾಗಿರಲಿಲ್ಲ ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಜಿಲ್ಲಾಧಿಕಾರಿ  ಮಂಜುನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Advertisement
Advertisement

Udayavani is now on Telegram. Click here to join our channel and stay updated with the latest news.

Next