ನವೀಕರಣವನ್ನು ಆನ್‌ಲೈನ್ ಮೂಲಕವೇ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
Advertisement
ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್‌ಎಟಿಎಸ್)ಯಲ್ಲಿ ಆನ್‌ಲೈನ್ ಮೂಲಕ ಮಾನ್ಯತೆ ನವೀಕರಣಕ್ಕೆ ಅವಕಾಶಮಾಡಿಕೊಡಲಾಗಿದೆ. ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಸಂಬಂಧ ಮಾನ್ಯತೆ
ನವೀಕರಣ ಅರ್ಜಿಯನ್ನು ಶಾಲಾ ಮುಖ್ಯ ಶಿಕ್ಷಕರ ಮೂಲಕ ಭರ್ತಿ ಮಾಡಿಸಿ ದೃಢೀಕರಿಸಲು ಸೂಚಿಸಲಾಗಿದೆ.
ರಾಜ್ಯದ ಎಲ್ಲ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಆನ್‌ಲೈನ್‌ನಲ್ಲಿ ನವೀಕರಣ ಮಾಡಿಸಿರಬೇಕು. ಇಲ್ಲವಾದರೆ
ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಇದಕ್ಕೆ ಜವಾಬ್ದಾರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.