ಚೆನ್ನೈ: ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಸುಮಾರು ಹತ್ತು ಜಿಲ್ಲೆಗಳ ಶಾಲೆಗಳಿಗೆ ಇಂದು(ಗುರುವಾರ ಡಿ.12) ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ಕೇಂದ್ರಾಡಳಿತ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ತಮಿಳುನಾಡಿನ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಿರುವಳ್ಳೂರು, ವೆಲ್ಲೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ರಾಮನಾಥಪುರಂ ಮತ್ತು ದಿಂಡಿಗಲ್ ನಲ್ಲಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆಯಾಗುವ ನಿಟ್ಟಿನಲ್ಲಿ ಡಿಸೆಂಬರ್ 11 ರಿಂದ 13 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಅರಿಯಲೂರ್, ತಂಜಾವೂರು, ತಿರುವರೂರು ಮತ್ತು ಪುದುಕೊಟ್ಟೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಇದನ್ನೂ ಓದಿ: KSRTC: ಮಂಗಳೂರು-ಕಾರ್ಕಳ ಕೆಎಸ್ಸಾರ್ಟಿಸಿ ಪ್ರಾಯೋಗಿಕ ಸಂಚಾರ ಆರಂಭ…