Advertisement

ದಕ್ಷಿಣ ಕನ್ನಡ : ಇಂದು ಶಾಲೆಗಳಿಗೆ ರಜೆ

07:17 AM Jul 30, 2022 | Team Udayavani |

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಗುಡುಗು- ಮಿಂಚು ಸಹಿತ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶನಿವಾರ (ಜು.30) ಮಂಗಳೂರು ಉಪವಿಭಾಗ ವ್ಯಾಪ್ತಿ  ಒಳಪಡುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ಮಂಗಳೂರು ನಗರ, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಅಂದರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಸ್ಥಳೀಯ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಥಳೀಯ ಪರಿಸ್ಥಿತಿ ಕಂಡು ರಜೆಯ ನಿರ್ಧಾರ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ನಿರ್ದೇಶನ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next