Advertisement
ಈ ವರ್ಷ ಕಾನೂನಿನ ಸುಳಿಯಲ್ಲಿ ಸಿಲುಕಿಕೊಂಡಿದ್ದ ಮೌಲ್ಯಾಂಕನ ಪರೀಕ್ಷೆ ಮುಂದಿನ ವರ್ಷವು ಮುಂದುವರಿಯಲಿದೆ. ಆದರೆ ಮೌಲ್ಯಾಂಕನದ ಬಗ್ಗೆ ಪ್ರತ್ಯೇಕ ಸುತ್ತೋಲೆ ಹೊರಡಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
Related Articles
Advertisement
ಹಾಗೆಯೇ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಎರಡು ಜತೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ, ಖಾಸಗಿ ಶಾಲೆಗಳಿಗೆ ಪಠ್ಯ ಪುಸ್ತಕಗಳು ತಾಲೂಕುಗಳಿಗೆ ಸರಬರಾಜು ಆಗುತ್ತಿದ್ದು, ಮೊದಲ ಹಂತದಲ್ಲಿ ಎ. 10ರಂದು ಮುಖ್ಯೋಪಾಧ್ಯಯರು ಈ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸಬೇಕು ಎಂದು ಸೂಚಿಸಲಾಗಿದೆ.
ಜೂ. 30ರೊಳಗೆ ಶಾಲಾ ದಾಖಾಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ,
ಎಸೆಸೆಲ್ಸಿ ಪರೀಕ್ಷೆ ಮುಕ್ತಾಯ:ಆಕ್ಷೇಪಣೆಗೆ 8ರ ವರೆಗೆ ಅವಕಾಶ
ಬೆಂಗಳೂರು: ಶನಿವಾರ ದ್ವಿತೀಯ ಭಾಷೆ ಪರೀಕ್ಷೆ ನಡೆಯುವುದರೊಂದಿಗೆ ಪ್ರಸಕ್ತ ವರ್ಷದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ -1 ಸುಸೂತ್ರವಾಗಿ ಮುಕ್ತಾಯಗೊಂಡಿದೆ. ಮಾ.15ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಶನಿವಾರ ನಡೆದ ದ್ವಿತೀಯ ಭಾಷೆ ಕನ್ನಡ ಮತ್ತು ಆಂಗ್ಲ ಭಾಷಾ ಪರೀಕ್ಷೆಗೆ 8.41 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 8.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 15,402 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟಾರೆ ಶೇ. 98.2ರ ಹಾಜರಾತಿ ದಾಖಲಾಗಿದೆ. ಪರೀಕ್ಷೆ ಅಕ್ರಮ ವರದಿ ಆಗಿಲ್ಲ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸೆಸೆಲ್ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ತನ್ನ ಜಾಲ ತಾಣದಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದರೆ ವಿದ್ಯಾರ್ಥಿ ಮತ್ತು ಪೋಷಕರಿಂದ ಎ. 8ರ ಸಂಜೆ 4ರ ಒಳಗೆ ಮಂಡಳಿಯ ಜಾಲತಾಣ https://kseab.karnataka.gov.in ಕ್ಕೆ ಸಲ್ಲಿಸಬೇಕು. ಅನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕ ಎಚ್. ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.