Advertisement

ವಿಕ್ರೋಲಿ ಇಂಗ್ಲಿಷ್‌ ಹೈಸ್ಕೂಲ್‌ನಲ್ಲಿ ವಿಜ್ಞಾನ ಮತ್ತು ಕಲಾ ಪ್ರದರ್ಶನ

03:06 PM Mar 14, 2019 | |

ಮುಂಬಯಿ: ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ನಮ್ಮ ಶಿಕ್ಷಣ ಸಂಸ್ಥೆಯು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಅವರಿಗೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ. ಇದರಲ್ಲಿ ಶಿಕ್ಷಕ ವೃಂದದವರ ಪಾತ್ರವೂ ಮಹತ್ತರವಾಗಿದೆ. ಮಕ್ಕಳು ತಮಗೆ ಸಿಕ್ಕ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡಾಗ ಅವರು ಪ್ರತಿಭಾವಂತರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ವಿಕ್ರೋಲಿ ಕನ್ನಡ ಸಂಘದ ಅಧ್ಯಕ್ಷ ಶ್ಯಾಂಸುಂದರ್‌ ಶೆಟ್ಟಿ ನುಡಿದರು.

Advertisement

ಮಾ. 1ರಂದು ವಿಕ್ರೋಲಿ ಕನ್ನಡ ಸಂಘ ಸಂಚಾಲಕತ್ವದ ವಿಕ್ರೋಲಿಯ ಪೂರ್ವ ಠಾಕೂರ್‌ ನಗರದಲ್ಲಿರುವ ವೀಕೇಸ್‌ ಇಂಗ್ಲೀಷ್‌ ಹೈಸ್ಕೂಲ್‌ನಲ್ಲಿ ನಡೆದ ವಿದ್ಯಾರ್ಥಿಗಳ ವಿಜ್ಞಾನ ಮತ್ತು ಕಲಾ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಸ್ಥೆಯು ವರ್ಷಪೂರ್ತಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳ ಪ್ರತಿಭಾನ್ವೇಷಣೆಗೆ ಬೆಂಬಲವನ್ನು ನೀಡುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಮಕ್ಕಳು ಪಠ್ಯಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರತಿಭಾವಂತರಾಗಿ ಬೆಳೆಯಲು ಸಾಧ್ಯವಿದೆ. ಮಕ್ಕಳ ಶ್ರೇಯೋಭಿವೃದ್ಧಿಯ ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರ ಸದಾಯಿರಲಿ. ಮಕ್ಕಳ ಅಭಿರುಚಿಯನ್ನು ಅರಿತುಕೊಂಡು ಶಿಕ್ಷಕರು ಅವರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಶಿಕ್ಷಣ ಸಂಸ್ಥೆಯ ಪ್ರೈಮರಿ ಮತ್ತು  ಸೆಕೆಂಡರಿ ವಿಭಾಗದ ಮಕ್ಕಳು ವಿವಿಧ ರೀತಿಯ ಪ್ರೊಜೆಕ್ಟ್ಗಳನ್ನು ತಯಾರಿಸಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಅಲ್ಲದೆ ವಿಜ್ಞಾನಕ್ಕೆ ಸಂಬಂಧಿಸಿದ ವಸ್ತುಗಳು, ಕ್ರಾಫ್ಟ್‌ಗಳನ್ನು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ವಿಕ್ರೋಲಿ ಕನ್ನಡ ಸಂಘದ ಜತೆ ಕೋಶಾಧಿಕಾರಿಗಳಾದ ಉಮೇಶ್‌ ಪೂಜಾರಿ ಮತ್ತು ಪ್ರವೀಣ್‌ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಯುಗಾನಂದ ಶೆಟ್ಟಿ, ಹರೀಶ್‌ ಉಚ್ಚಿಲ್‌, ಪುಷ್ಪಲತಾ ನಾಯಕ್‌, ಶಾಲಿನಿ ಕುಂದರ್‌ ಅವರು ಉಪಸ್ಥಿತರಿದ್ದು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು.

ಪ್ರೈಮರಿ ಮತ್ತು ಸೆಕೆಂಡರಿ ವಿಭಾಗದ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ವಿದ್ಯಾರ್ಥಿಗಳು ಹಾಗೂ ಪಾಲಕ-ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು. ವಿಜೇತ ಮಕ್ಕಳನ್ನು ಅಭಿನಂದಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next