Advertisement
ತೆಲಂಗಾಣ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ಕರ್ನಾಟಕ, ಪುದುಚೆರಿ ಸೇರಿದಂತೆ ಏಳು ರಾಜ್ಯಗಳಿಂದ ಪ್ರಬಲ ಪೈಪೋಟಿ ನೀಡಿದ್ದರು. ಸ್ಪರ್ಧೆಯಲ್ಲಿ ಕೇರಳ ಪ್ರಥಮ ಸ್ಥಾನ ಪಡೆದುಕೊಂಡರೆ ಕರ್ನಾಟಕದ ಪ್ರತಿನಿಧಿಯಲ್ಲಿ ಒಂದಾಗಿದ್ದ ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢಶಾಲೆ ಮಕ್ಕಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
Related Articles
Advertisement
ಪಾತ್ರಧಾರಿಗಳಾಗಿ ತುಳಸಿ ಹೆಗಡೆ, ಸ್ಪಂದನಾ ಭಟ್ಟ, ಜಯಶ್ರೀ ಭಟ್ಟ, ನವ್ಯಾ ಹೆಗಡೆ, ಶ್ರೀಜಾ ಭಟ್ಟ, ಮಾನ್ಯ ಹೆಗಡೆ, ಕಿಶನ್ ಕುಮಾರ ಹೆಗಡೆ , ದರ್ಶನ್ ಎಸ್. ಭಟ್, ಪ್ರತ್ವಿಕ್ ಮೋಹನದಾಸ ನಾಯಕ ಅಚ್ಚುಕಟ್ಟಾಗಿ ನಿರ್ವಹಿಸಿ ನಾಟಕ ಪರಿಣಾಮಕಾರಿಯಾಗಿಸಿದರು. ಅತ್ಯುತ್ತಮ ಸ್ಕ್ರಿಪ್ಟ್ ಪ್ರಶಸ್ತಿ ಬಹುಮಾನ ಶಿಕ್ಷಕಿ ಜಯಲಕ್ಷ್ಮೀ ಗುನಗಾ ಅವರಿಗೆ ಲಭಿಸಿದೆ. ನಾಗರಾಜ ಭಂಡಾರಿ ಬೆಳಕಿನ ಸಹಕಾರ ನೀಡಿದರು.
ಭಾರತ ದೇಶ ಮಟ್ಟಕ್ಕೆ ಆಯ್ಕೆ ಆದ ಮಾರಿಕಾಂಬಾದ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಆರ್.ಡಿ.ಹೆಗಡೆ, ಡಿಡಿಪಿಐ ಬಸವರಾಜು, ಬಿಇಓ ಎಂ.ಎಸ್.ಹೆಗಡೆ, ಮಾರಿಕಾಂಬಾ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಆರ್.ವಿ.ನಾಯ್ಕ, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.