Advertisement

ವಿಜ್ಞಾನ ಶಿಕ್ಷಕರ ಮಾರ್ಗದರ್ಶನ ಅವಶ್ಯ; ಶಿಕ್ಷಕರು-ಮಕ್ಕಳಿಗೆ ಅನುಕೂಲ

04:59 PM Nov 19, 2022 | Team Udayavani |

ಬಾಗಲಕೋಟೆ: ವಿಜ್ಞಾನ ಶಿಕ್ಷಕರ ಮಾರ್ಗದರ್ಶನ ಇಂದಿನ ವೈಜ್ಞಾನಿಕ ಲೋಕಕ್ಕೆ ಅವಶ್ಯಕವಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿ ಕಾರಿ ಎಂ.ಜಿ.ಬೆಳ್ಳೆಣ್ಣವರ ಹೇಳಿದರು.

Advertisement

ಗದ್ದನಕೇರಿಯ ಮಳಿಯಪ್ಪ ಸ್ವಾಮಿ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಮಾರ್ಗದರ್ಶಿ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಜ್ಞಾನ ಶಿಕ್ಷಕರು ಅಚ್ಚುಕಟ್ಟುತನದಿಂದ ಬಾಲ ವಿಜ್ಞಾನಿಗಳಿಗೆ ಮಾರ್ಗದರ್ಶನ ಮಾಡಿ ಸೂಕ್ತ ಯೋಜನೆಗಳನ್ನು ತರಲು ಎಲ್ಲರೂ ಶ್ರಮಿಸಬೇಕು ಎಂದರು.

ಮಾರ್ಗದರ್ಶಿ ಶಿಕ್ಷಕರ ಕೈಪಿಡಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಡಿವೈಪಿಸಿ ಉಪ ಸಮನ್ವಯಾಧಿಕಾರಿ ಜಾಸ್ಮಿನ್‌ ಕಿಲ್ಲೆದಾರ್‌, ಮಕ್ಕಳ ಸುತ್ತಮುತ್ತಲಿನ ಪರಿಸರದಲ್ಲಿರುವ ಅನೇಕ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರೋಪಾಯಗಳನ್ನು ಕಂಡುಹಿಡಿಯಲು ಇಂತಹ ತರಬೇತಿ ಕಾರ್ಯಕ್ರಮಗಳು ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಅನುಕೂಲಕರವಾಗಿವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾದ ಎಚ್‌.ಜಿ.ಹುದ್ದಾರವರು ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಬಾಲ ವಿಜ್ಞಾನಿಗಳನ್ನು ಕಳುಹಿಸುವಲ್ಲಿ ಬಾಗಲಕೋಟೆ ಜಿಲ್ಲೆ ಮುಂದಿದೆಯೆಂದರು. 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಹೆಚ್ಚಿನ ಯೋಜನೆಗಳು ಬರಬೇಕೆಂದು ಎಲ್ಲ ಶಿಕ್ಷಕರಿಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಾಗಲಕೋಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಾವಿತ್ರಿ ಕೊಂಡಗೋಳಿ ಮಾತನಾಡಿ ನಮ್ಮ ಅವ ಯಲ್ಲಿಯೂ ಕೂಡ ಶಿಕ್ಷಕಿಯಾಗಿ ಎರಡು ಸಾರಿ ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿಗಳನ್ನು ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಕರೆದುಕೊಂಡು ಹೋಗಿರುವುದನ್ನು ನೆನಪಿಸಿದರು.

Advertisement

ವಿಜ್ಞಾನ ಶಿಕ್ಷಕರು ಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯಿಂದ ಹೆಚ್ಚಿನ ಮಾದರಿಗಳು ಮತ್ತು ಯೋಜನೆಗಳು ರಾಷ್ಟ್ರಮಟ್ಟಕ್ಕೆ ಹೋಗಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಬಲರಾಮ್‌ ನಾಯಕ ಮಾತನಾಡಿ, ಗುರುಗಳ ಉಪಸ್ಥಿತಿಯಲ್ಲಿ ತರಬೇತಿಗಳು ನಡೆದರೆ ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದರು.

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಪ್ರತಿಯೊಂದು ಮಗುವಿನ ಹಿಂದೆ ಗುರುವಿನ ಪರಿಶ್ರಮ ಇದ್ದೇ ಇರುತ್ತದೆ ವಿಜ್ಞಾನ ಶಿಕ್ಷಕರು ವಿಶೇಷ ಜ್ಞಾನ ಉಳ್ಳವರಾಗಿದ್ದು, ಮಕ್ಕಳನ್ನು ತಯಾರು ಮಾಡುವಲ್ಲಿ ಪರಿಶ್ರಮ ವಹಿಸಬೇಕು ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಿದ ಸಂಪನ್ಮೂಲ ವ್ಯಕ್ತಿಗಳಾದ ಎಸ್‌.ಎಸ್‌.ಬಳ್ಳೂರಗಿ ಹಾಗೂ ಅರುಣ ಶಂಭೋಜಿ ಕಾರ್ಯಕ್ರಮದಲ್ಲಿ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಕುರಿತು ಮಕ್ಕಳಿಗೆ ಮಾರ್ಗದರ್ಶನ ಮಾಡುವ ಕುರಿತು ಹೇಳಿದರು. ಜಿಲ್ಲಾ ಸಂಚಾಲಕ ಶ್ರೀನಿವಾಸ್‌ ಬೆನಕಟ್ಟಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಶೆಟ್ಟರ್‌ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಗುಜ್ಜರ್‌ ಹಾಗೂ ಹಾಗೂ ಹಿರಿಯ ಅ ಧಿಕಾರಿಗಳು ಉಪಸ್ಥಿತರಿದ್ದರು.

ಸಂಜಯ ನಡುವಿನಮನಿ ನಿರೂಪಿಸಿದರು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾ ಶೈಕ್ಷಣಿಕ ಸಂಯೋಜಕರಾದ ಬಿ.ಟಿ.ಹಳ್ಳಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next