Advertisement

ಪ್ರತಿಭಾವಂತರಿಗೆ ವಿಜ್ಞಾನ ತರಬೇತಿ

09:56 PM Mar 05, 2020 | Lakshmi GovindaRaj |

ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಶಿಕ್ಷಣ ನೀಡಲು ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮವನ್ನು ಪ್ರಾರಂಭಿ ಸಲಾಗುವುದು. ಪ್ರಮುಖ ವಿಜ್ಞಾನ ಸಂಸ್ಥೆಗಳ ಮೂಲಕ ಸುಮಾರು 500 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, 2 ವರ್ಷಗಳವರೆಗೆ ಶಿಕ್ಷಣ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕ 1000 ರೂ. ಶಿಷ್ಯ ವೇತನ ನೀಡಲಾಗುವುದು.

Advertisement

5 ಜಿಲ್ಲೆಗೆ ತಾರಾಲಯ ವಿಸ್ತರಣೆ: ರಾಜ್ಯದ 11 ಜಿಲ್ಲೆಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಂಚಾರಿ ಡಿಜಿಟಲ್‌ ತಾರಾಲಯಗಳು, ಖಗೋಳವಿಜ್ಞಾನದ ವಿಸ್ಮಯಗಳ ಬಗ್ಗೆ ಗ್ರಾಮೀಣ ಶಾಲೆಗಳ ವಿದ್ಯಾರ್ಥಿಗಳನ್ನು ಸುಶಿಕ್ಷಿತರನ್ನಾಗಿಸುವಲ್ಲಿ ಯಶಸ್ವಿಯಾಗಿವೆ. ಈ ಸೌಲಭ್ಯವನ್ನು 5 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 5 ಇತರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು.

ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸೆಂಟರ್‌ಗೆ 5 ಕೋಟಿ ರೂ.: ರಾಜ್ಯದಲ್ಲಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಅಗತ್ಯವಾದ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ತಂತ್ರಜ್ಞಾನ ಒದಗಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸೆಂಟರ್‌ ಸ್ಥಾಪನೆಯಾಗುವ ಘೋಷಣೆಯಾಗಿದೆ. ಕೈಗಾರಿಕೆಗಳ ಸಹಯೋಗದಲ್ಲಿ ಸ್ಥಾಪನೆಯಾಗುವ ಕೇಂದ್ರಕ್ಕೆ ಬಜೆಟ್‌ನಲ್ಲಿ 5 ಕೋಟಿ ರೂ. ಕಾಯ್ದಿರಿಸಲಾಗಿದೆ.

ಕರ್ನಾಟಕ ನಗರ ವೀಕ್ಷಣಾಲಯ: ರಾಜ್ಯದಲ್ಲಿ “ಕರ್ನಾಟಕ ನಗರ ವೀಕ್ಷಣಾಲಯ’ ಸ್ಥಾಪನೆ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಇದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಜಾರಿಗೊಳಿಸಲು ಉದ್ದೇಶಿಸಿದೆ. ತಂತ್ರಜ್ಞಾನ ಆಧಾರಿತ ಆಡಳಿತದ ಪ್ರಾತ್ಯಕ್ಷಿಕೆ, ದತ್ತಾಂಶಗಳ ಬಳಕೆ ಆಧಾರಿತ ನೀತಿ, ನಿರೂಪಣೆ ಮತ್ತು ದತ್ತಾಂಶಗಳ ಮುಕ್ತ ಉಪಯೋಗಕ್ಕೆ ಪೂರಕವಾಗುವ ವಿಶ್ವಾಸ ವ್ಯಕ್ತಪಡಿಸಿದೆ.

ಖನಿಜಾನ್ವೇಷಣೆ ವಿಭಾಗ ರಚನೆ: ರಾಜ್ಯದಲ್ಲಿ ಲಭ್ಯವಿರುವ ಅಮೂಲ್ಯ ಖನಿಜ ನಿಕ್ಷೇಪ ಪತ್ತೆ ಖನಿಜಾನ್ವೇಷಣೆ ವಿಭಾಗ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದ ವಿವಿಧ ಕಡೆ ಇರುವ ಅಮೂಲ್ಯ ಖನಿಜಗಳ ನಿಕ್ಷೇಪಗಳನ್ನು ಗುರುತಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಕೇಂದ್ರ ಕಚೇರಿಯಲ್ಲಿ ಖನಿಜಾನ್ವೇಷಣೆ ವಿಭಾಗ ಸ್ಥಾಪಿಸುವುದು. ಖನಿಜ ನಿಕ್ಷೇಪ ಗುರುತಿಸಿ ನಿಯಮಾನುಸಾರ ವಿಲೇವಾರಿ ಮಾಡುವುದರಿಂದ ಬೊಕ್ಕಸಕ್ಕೆ ಹೆಚ್ಚಿನ ರಾಜಸ್ವ ಬರಲಿದೆ ಎಂಬುದು ಸರ್ಕಾರದ ನಿರೀಕ್ಷೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next