Advertisement

‘ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕ ಬದಲಾವಣೆ’

12:24 PM Apr 06, 2022 | Team Udayavani |

ಸುಳ್ಯ: ಎಲ್ಲರೂ ಸಮಾನರಾಗಿ ಬದುಕಬೇಕೆಂದು ಶ್ರಮಿಸಿದವರಲ್ಲಿ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ ರಾಂ ಕೂಡ ಒಬ್ಬರು. ಈ ಬಗೆಗಿನ ಕಾನೂನು ಪರಿಣಾಮಕಾರಿಯಾಗಿ ಜಾರಿಗೆ ತರಲು ಶ್ರಮಿಸಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಅವರು ಬಯಸುತ್ತಿದ್ದರು ಹಾಗೂ ಅವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ದೇಶದ ಕಟ್ಟ ಕಡೆಯ ಸಮುದಾಯದ ಹಿತರಕ್ಷಣೆಗಾಗಿಯೂ ಅವರು ಕಾರ್ಯ ಪ್ರವೃತ್ತರಾಗಿದ್ದರು. ಕೃಷಿ ಕ್ಷೇತ್ರದಲ್ಲಿ ಅನೇಕ ವೈಜ್ಞಾ ನಿಕ ಬದಲಾವಣೆ ತಂದಿದ್ದರು ಎಂದು ಸುಳ್ಯ ನ.ಪಂ. ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಹೇಳಿದರು.

Advertisement

ಸುಳ್ಯ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣ ಸಮಿತಿ ಆಶ್ರಯದಲ್ಲಿ ಹಸುರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್‌ ರಾಂ ಅವರ 115ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ತಹಶೀಲ್ದಾರ್‌ ಅನಿತಾಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಚಂದ್ರಮತಿ ಪ್ರಮುಖ ಭಾಷಣ ನೆರವೇರಿಸಿದರು.

ತಾಲೂಕು ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ಮಹಾದೇವ ಉಪಸ್ಥಿತರಿದ್ದರು. ವಸತಿ ನಿಲಯ ಮೇಲ್ವಿಚಾರಕ ಮಾಧವ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next