Advertisement
ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಸರ್ಕಾರ ಈಗಾಗಲೆ ವಿವಿಧ ಯೋಜನೆ ಜಾರಿಗೆ ಬಂದಿದೆ. ಅದಕ್ಕಿಂತ ಮುಖ್ಯವಾಗಿ ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಲು ದೈಹಿಕ ಶಿಕ್ಷರಿಗೇ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡಲು ತೀರ್ಮಾನಿಸಲಾಗಿದೆ. ವಿಕಾಸ ಸೌಧದಲ್ಲಿ ಇಂದು (ಸಪ್ಟೆಂಬರ್ 7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಕ್ರೀಡಾ ವಿಜ್ಞಾನ ಕೇಂದ್ರದ ಮೂಲಕ ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲಾಗುತ್ತಿದ್ದು, ಅಂತವರಿಗೆ ತರಬೇತಿ ಪಡೆದ 1666 ಪರಿಣಿತ ದೈಹಿಕ ಶಿಕ್ಷಕರಿಂದ ತರಬೇತಿ ನೀಡಲಾಗುವುದು. ಶಿಕ್ಷಣ ಇಲಾಖೆಯಿಂದ ಈಗಾಗಲೇ 1666 ದೈಹಿಕ ಶಿಕ್ಷಕರ ಪಟ್ಟಿ ಪಡೆಯಲಾಗಿದ್ದು, ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲು ಆರಂಭಿಸಲಾಗುವುದು ಎಂದಿದ್ದಾರೆ.
Related Articles
Advertisement
ಸೆ. 24 ರಂದು ವೈಮಾನಿಕ ತರಬೇತಿ ಶಾಲೆ ಪುನಾರಂಭ
ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆರಂಭ ಆಗಲೇಬೇಕು. ಇನ್ನಷ್ಟು ಸಮಯ ನೀಡಲು ಸಾಧ್ಯವಿಲ್ಲ. ಅಧಿವೇಶನ ಮುಗಿದ ಮಾರನೆ ದಿನ ವೈಮಾನಿಕ ತರಬೇತಿ ಶಾಲೆ ಪುನಾರಂಭ ಆಗಬೇಕು. ಮುಖ್ಯ ಮಂತ್ರಿಗಳನ್ನು ಆಹ್ವಾನಿಸಿ, ಉದ್ಘಾಟಿಸಲಾಗುವುದು ಎಂದು ಸಚಿವ ಡಾ. ನಾರಾಯಣ ಗೌಡ ತಿಳಿಸಿದರು. 45 ಹಳೆ ವಿದ್ಯಾರ್ಥಿಗಳಿದ್ದು, ಈಗಾಗಲೆ 35 ವಿದ್ಯಾರ್ಥಿಗಳು ತರಬೇತಿ ಪಡೆಯಲು ಬರುವುದಾಗಿ ತಿಳಿಸಿದ್ದಾರೆ. ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡಲಾಗುವುದು. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ನಿಗದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಂದಿನ ಮಾರ್ಚ್ 5 ರಿಂದ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಕ್ರೀಡೆಯ ಆಯೋಜನೆಗೆ ರೂ. 25 ಕೋಟಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೂಲ ಸೌಕರ್ಯಕ್ಕಾಗಿ ರೂ. 18 ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೂ ರೂ. 22 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೆ ಅತಿ ಶೀಘ್ರದಲ್ಲಿ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನ ಲೋಗೋ, ಥೀಮ್ ಸಾಂಗ್, ಜೆರ್ಸಿ ಲಾಂಚ್ ಆಗಬೇಕು ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್, ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.
ಇದನ್ನೂ ಓದಿ : ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ