Advertisement

SCO: ಭಾರತಕ್ಕೆ ಬರಲಿದ್ದಾರೆ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾಲ್‌ ಭುಟ್ಟೋ

10:56 PM Apr 20, 2023 | Team Udayavani |

ನವದೆಹಲಿ: ಮುಂದಿನ ತಿಂಗಳ 4, 5ರಂದು ಪಣಜಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟದ (SCO) ಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಆಗಮಿಸುವುದು ಖಚಿತವಾಗಿದೆ. ಈ ಬಗ್ಗೆ ಅಲ್ಲಿನ ವಿದೇಶಾಂಗ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 2014 ಮೇ 26ಕ್ಕೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ವೇಳೆ ಅಂದಿನ ಪಾಕ್‌ ಪ್ರಧಾನಿ ನವಾಜ್‌ ಶರೀಫ್ ಭಾರತಕ್ಕೆ ಆಗಮಿಸಿದ್ದರು. ಒಕ್ಕೂಟದ ಸಭೆಗೆ ಬರುವಂತೆ ಕೇಂದ್ರ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಬಿಲಾವಲ್‌ ಭುಟ್ಟೋಗೆ ಆಹ್ವಾನ ನೀಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ಬಾಂಧವ್ಯ ಹದಗೆಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next