Advertisement

Kadaba ಸ್ಕೂಟರ್‌ ಸ್ಕಿಡ್‌: ವ್ಯಾಪಾರಿ ಸಾವು

10:07 PM Aug 28, 2024 | Team Udayavani |

ಕಡಬ: ಸ್ಕೂಟರ್‌ ಸ್ಕಿಡ್‌ ಆಗಿ ಬಿದ್ದ ಪರಿಣಾಮ ಸ್ಕೂಟರ್‌ ಸವಾರ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ನಿವಾಸಿ ಚೋಮ (40) ಅವರು ಮೃತಪಟ್ಟ ಘಟನೆ ಆ. 28ರಂದು ರಾತ್ರಿ ಸಂಭವಿಸಿದೆ.

Advertisement

ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮ ಅ ವರು ರಾತ್ರಿ ಗೂಡಂಗಡಿ ಮುಚ್ಚಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚೋಮ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next