ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ನಿಡಿಗಲ್ ಕೊಕ್ಕೋ ಪ್ಲಾಂಟೇಶನ್ ಸಮೀಪ ಮಂಗಳವಾರ ಬೆಳಗ್ಗೆ ಸ್ಕಾರ್ಪಿಯೋ ಹಾಗೂ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಕಲ್ಮಂಜ ಗ್ರಾಮದ ಕೇಲೆಂಗಿ ನಿವಾಸಿ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಅಶೋಕ್ ಕುಮಾರ್ (56) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Advertisement
ಇವರು ಹಾಲು ಉತ್ಪಾದಕರ ಸಂಘಕ್ಕೆ ಮುಂಡಾಜೆ ಕಡೆ ತೆರಳುತ್ತಿದ್ದಾಗ ಮುಂಭಾಗದಿಂದ ಬಂದ ಸ್ಕಾರ್ಪಿಯೋ ಬೈಕಿಗೆ ಢಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.