ನವದೆಹಲಿ: ಕಳೆದ ತಿಂಗಳು ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಚೇಳು ಕಚ್ಚಿದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಎ. 23, 2023 ರಂದು ವಿಮಾನ AI 630 ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಚೇಳು ಕಚ್ಚಿದ್ದು ಅತ್ಯಂತ ಅಪರೂಪದ ಮತ್ತು ದುರದೃಷ್ಟಕರ ಘಟನೆ ನಡೆದಿದೆ” ಎಂದು ಏರ್ ಇಂಡಿಯಾ ಹೇಳಿದೆ.
ವಿಮಾನದಿಂದ ಇಳಿದ ತಕ್ಷಣ ಮಹಿಳಾ ಪ್ರಯಾಣಿಕರಿಗೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ಪಡೆದ ಏರ್ ಇಂಡಿಯಾದ ಇಂಜಿನಿಯರಿಂಗ್ ತಂಡವು ವಿಮಾನವನ್ನ ಸಂಪೂರ್ಣ ತಪಾಸಣೆ ನಡೆಸಿ ಚೇಳನ್ನು ಪತ್ತೆಹಚ್ಚಿದ ನಂತರ ವಿಮಾನವನ್ನ ಸಂಪೂರ್ಣವಾಗಿ ಹೊಗೆ ಹಾಕುವ ಪ್ರಕ್ರಿಯೆ ನಡೆಸಲಾಯಿತು.
Related Articles
ಕಳೆದ ವರ್ಷ ಡಿಸೆಂಬರ್‌ನಲ್ಲಿ ಕ್ಯಾಲಿಕಟ್‌ನಿಂದ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಪತ್ತೆಯಾಗಿತ್ತು.