Advertisement
ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರವಾಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು.
Related Articles
Advertisement
ಗ್ಯಾರೆಂಟಿ ಗಳಲ್ಲಿ ಜನರಿಗೆ ಮೋಸ ಮಾಡಿದ್ದೀರಿ, ಕರೆಂಟ್ ದರ ಹೆಚ್ಚಳ ಮಾಡಿದ್ದೀರಿ, ಗೃಹಲಕ್ಷ್ಮೀಗೆ ಇನ್ನೂ ಯಜಮಾನಿಯನ್ನು ಹುಡುಕಾಟ ನಡೆಸಿದ್ದಾರೆ. ಯುವ ನಿಧಿ ಅಯೋಮಯವಾಗಿದೆ. ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಜೆಡಿಎಸ್ ನಲ್ಲಿ ನಡವಳಿಕೆ, ತೀರ್ಮಾನ ಸರಿಯಿಲ್ಲವೆಂದು ಹೊರಗೆ ಬಂದಿದ್ದೇನೆ: ಚೆಲುವರಾಯಸ್ವಾಮಿ
ನಾವು ಕೊವಿಡ್ ಸಂದರ್ಭದಲ್ಲಿ ನಾವು ಉತ್ತಮ ಆರ್ಥಿಕ ನಿರ್ವಹಣೆ ಮಾಡಿದ್ದಕ್ಕೆ ನೀವು ಇಷ್ಟು ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗಿದೆ. ನಮ್ಮ ಅವಧಿಯಲ್ಲಿ ಜಿಎಸ್ ಟಿ, ಮೊಟರ್ ವೆಹಿಕಲ್ ತೆರಿಗೆ ಎಲ್ಲವೂ ಹೆಚ್ಚು ಸಂಗ್ರಹವಾಗಿದೆ. ಕೋವಿಡ್ ಸಂದರ್ಭದಲ್ಲಿ ನರೇಂದ್ದ ಮೋದಿಯವರು ರಾಜ್ಯಕ್ಕೆ ಅತಿ ಹೆಚ್ಚು ಹಣ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳೆದ ವರ್ಷ 3500 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಅವರು ಸೋನಿಯಾ ಗಾಂಧಿ ಮುಂದೆ ಹೊಗಿ ನಿಲ್ಲಲು ಆಗುತ್ತಿರಲಿಲ್ಲ. ಕೇಂದ್ರ ನೀಡಿದ ಹಣದ ಬಗ್ಗೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪ ಮಾಡದೆ ಮರೆಮಾಚಿದ್ದಾರೆ ಎಂದು ಆರೋಪಿಸಿದರು.
ಐಎಎಸ್ ಅಧಿಕಾರಿಗಳ ಸೇವಾ ನಿಯಮದ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ ವಿವರವಾಗಿ ಪತ್ರದ ಮೂಲಕ ಹೇಳಿದ್ದಾರೆ. ಸ್ಪೀಕರ್ ಅತ್ಯಂತ ಸಣ್ಣ ವಯಸ್ಸಿನಲ್ಲಿ ಸ್ಪೀಕರ್ ಆಗಿದ್ದೀರಿ. ನೀವು ಕಾಂಗ್ರೆಸ್ ಭೋಜನ ಕೂಟಕ್ಕೆ ತೆರಳಿ ಅವರ ಬಾಗಿಲು ಕಾದಿರಿ, ಇದರಿಂದ ನಿಮಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅವಮಾನವಾಗಿದೆ. ನಾವು ಸದನದಲ್ಲಿ ಪ್ರತಿಭಟನೆ ಮಾಡಿದರೆ ಕರೆದು ಚಹಾ ಕೊಡಬೇಕಿತ್ತಾ ಅಂತ ಕೇಳಿದ್ದೀರಿ, ನಾವು ನಿಮ್ಮ ಚಹಾ ಕುಡಿಯುಲು ಸದನಕ್ಕೆ ಬಂದಿಲ್ಲ. ನಾವು ಜನರ ಪರವಾಗಿ ಚರ್ಚೆ ಮಾಡಲು ಬರುತ್ತೇವೆ. ನಾವೇ ನಿಮಗೆ ಪ್ರತಿ ದಿನ ಟೀ ಕುಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಐದು ಜನ ಟೆರೆರಿಸ್ಟ್ ಗಳು ಸಿಕ್ಕಿದ್ದಾರೆ. ಅವರನ್ನು ಟೆರೆರಿಸ್ಟ್ ಎನ್ನಲು ಆಗುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ. ಸಾಮಾನ್ಯ ಅಪರಾಧ ಮಾಡುವವರು ಹ್ಯಾಂಡ್ ಗ್ರ್ಯಾನೈಡ್ ಇಟ್ಟುಕೊಳ್ಳುತ್ತಾರಾ ? ಇದೆಲ್ಲದಕ್ಕೂ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.