Advertisement

SDM ಆಯುರ್ವೇದ ಮಹಾವಿದ್ಯಾಲಯ: ಭಾರತೀಯ ಆಯುರ್ವಿಜ್ಞಾನ ಜತೆಗೆ ಒಡಂಬಡಿಕೆ

11:43 PM Jan 30, 2024 | Team Udayavani |

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಗೌರವ ಉಪಸ್ಥಿತಿಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಹಾಸನದ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್‌ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು.

Advertisement

ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ| ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ| ಪ್ರಸನ್ನ ಎನ್‌. ರಾವ್‌, ಉಪಪ್ರಾಂಶುಪಾಲರಾದ ಡಾ| ಶೈಲಜಾ ಯು., ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥರಾದ ಡಾ| ಶ್ರೀನಾಥ ವೈದ್ಯ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ| ಅಶ್ವಿ‌ನಿ ಕುಮಾರ್‌ ಎಂ. ಮತ್ತು ಸಂಹಿತಾ ಸಿದ್ಧಾಂತ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next