ತಿರುವನಂತಪುರ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೂಲಭೂತವಾದಿ ಸಂಘಟನೆಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಈ ಸಂಘಟನೆಗಳನ್ನು ನಿಷೇಧಿಸಲಾಗಿಲ್ಲ ಎಂದೂ ಅದು ತಿಳಿಸಿದೆ.
ಆರ್‌ಎಸ್‌ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಎಸ್‌ಡಿ
ಪಿಐ ಮತ್ತು ಪಿಎಫ್ಐ ಮೂಲಭೂತವಾದಿ ಸಂಘಟನೆಗಳು ಎಂಬುದರಲ್ಲಿ ಯಾವುದೇ ಸಂಶಯವೇ ಇಲ್ಲ. ಇವು ತೀವ್ರತರನಾದ ಹಿಂಸಾಕೃತ್ಯಗಳಲ್ಲೂ ತೊಡಗಿವೆ. ಇದರ ಜತೆಯಲ್ಲೇ ನಾವು ಇವು ನಿಷೇಧಿತ ಸಂಘಟನೆಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಸಂಜಿತ್ ಅವರ ಪತ್ನಿ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಒಮ್ಮೆ ಪ್ರಕರಣವನ್ನು ಹಸ್ತಾಂತರಿಸಿದರೆ ತನಿಖೆಯಲ್ಲಿ ಇನ್ನಷ್ಟು ವಿಳಂಬವಾಗಬಹುದು ಎಂದು ಹೇಳಿದೆ. ಜತೆಗೆ ಈಗಾಗಲೇ ರಾಜ್ಯ ಪೊಲೀಸರೇ ಪ್ರಕರಣ ಸಂಬಂಧ ಹಲವಾರು ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿಸಿದೆ.