Advertisement

ಹಿಂದೂ-ಮುಸ್ಲಿಂರನ್ನು ಬೇರೆ ಮಾಡೋ ಕೆಲಸ ಎಸ್ ಡಿಪಿಐ- ಪಿಎಫ್ಐ ಮಾಡುತ್ತಿದ್ದವು: ಈಶ್ವರಪ್ಪ

02:50 PM Sep 27, 2022 | Team Udayavani |

ಶಿವಮೊಗ್ಗ: ರಾಷ್ಟ್ರದ್ರೋಹಿ ಚಟುವಟಿಕೆ ಮಾಡಿದ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಬಂಧನ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

Advertisement

ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಹಿಂದೂ – ಮುಸ್ಲಿಂ- ಕ್ರೈಸ್ತರು ಒಟ್ಟಾಗಿ ಬಾಳಲು.  ಎಸ್ ಡಿಪಿಐ ಮತ್ತು ಪಿಎಫ್ಐ ಹಿಂದೂ-ಮುಸ್ಲಿಂರನ್ನು ಬೇರೆ ಬೇರೆ ಮಾಡು ಕೆಲಸ ಮಾಡುತ್ತಿದ್ದರು. ಗೋಹತ್ಯೆ ಜೊತೆಗೆ ಹಿಂದೂ ಸಂಸ್ಕೃತಿಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದರು. ಈ ರಾಷ್ಟ್ರದ್ರೋಹಿ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ಇರಬಾರದೆಂದು ರಾಷ್ಟ್ರಭಕ್ತ ಮುಸ್ಲಿಂರೂ ಕೂಡಲೇ ಖಂಡನೆ ಮಾಡಬೇಕು. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದರು

ಇದನ್ನೂ ಓದಿ:ಭವಿಷ್ಯದ ಪೀಳಿಗೆ ಆರೋಗ್ಯಕರ ಜೀವನ ನಡೆಸುವಂಥ ಸಂಶೋಧನೆಗಳಾಗಲಿ: ಸಿಎಂ ಬೊಮ್ಮಾಯಿ

ಈ ದಾಳಿ ಕುರಿತು ಕಾಂಗ್ರೆಸ್ ನವರು ಇನ್ನೂ ಬಾಯಿ ಬಿಟ್ಟಿಲ್ಲ. ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿರುವ ಕುರಿತು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ಇಲ್ಲ. ಕಾಂಗ್ರೆಸ್ ಹಿಂದಿನಿಂದಲೂ ರಾಷ್ಟ್ರದ್ರೋಹಿಗಳಿಗೆ ಬೆಂಬಲ ಕೊಡುವ ಕೆಲಸ ಮಾಡಿದೆ. ಇದಕ್ಕೂ ನಿಜಕ್ಕೂ ಕೂಡ ದೊಡ್ಡ ಅಪಮಾನ. ರಾಷ್ಟ್ರದ್ರೋಹಿ ಚಟುವಟಿಕೆಗಳು ನಡೆಯುತ್ತಿರುವಲ್ಲಿ ದಾಳಿ ಮುಂದುವರೆಯಬೇಕು.  ಕೇಂದ್ರ ಸರ್ಕಾರವು ದೇಶದ್ರೋಹಿ ಸಂಘಟನೆ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದೆ ಎಂದು ರಾಷ್ಟ್ರ ಭಕ್ತರಿಗೆ ವಿಶ್ವಾಸ ಬರಬೇಕು. ಕೇಂದ್ರ ಸರ್ಕಾರದ ಈ ನಿರ್ಧಾರ ಇಡೀ ದೇಶ ಸ್ವಾಗತ ಮಾಡುತ್ತಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next