ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಪಂಚಾಯತ್ ಮತ ಎಣಿಕೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಕಾರ್ಯಕರ್ತರನ್ನು ಬಂಧಿಸಿರುವ ಘಟನೆಯನ್ನು ಖಂಡಿಸಿ ಎಸ್‌ಡಿಪಿಐನಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಯಿತು.
ಅಮಾಯಕ ಯುವಕರ ಬಿಡುಗಡೆ ಮಾಡಬೇಕೆಂದು, ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಹಾಗೂ ಕರ್ತವ್ಯ ಲೋಪ ಎಸಗಿದ ಬೆಳ್ತಂಗಡಿ ಪೊಲೀಸ್ ಸಬ್‌ಇನ್ ಸ್ಪೆಕ್ಟರ್ ರನ್ನು ಅಮಾನತು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಟೌನ್‌ಹಾಲ್‌ನಿಂದ ವೆನ್ಲಾಕ್ ಆಸ್ಪತ್ರೆವರೆಗೆ ಎಸ್ ಡಿಪಿಐ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸಮಾವೇಶಗೊಂಡಿದ್ದರು. ಈ ವೇಳೆ ಪೊಲೀಸರು ಕೂಡ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು. ಇದೇ ವೇಳೆ ಎಸ್ಪಿ ಕಚೇರಿಗೆ ತೆರಳಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ತಡೆದರು.
ಸ್ಥಳಕ್ಕಾಗಮಿಸಿದ ಕಮಿಷನರ್ ಎನ್. ಶಶಿಕುಮಾರ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು
ಇದನ್ನೂ ಓದಿ: ದಕ್ಷಿಣಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ನಾಳೆಯಿಂದ ಲಸಿಕೆ ವಿತರಣೆ: ಜಿಲ್ಲಾಧಿಕಾರಿ ಮಾಹಿತಿ
ಇದನ್ನೂ ಓದಿ: ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್