Advertisement
ಏಷ್ಯಾದಲ್ಲಿ ಅತಿ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯನ್ನು ವಿಸ್ತರಿಸಿ, ಸಿವಿಲ್ ಎನ್‌ಕ್ಲೇವ್ ನಿರ್ಮಿಸುವ 2ನೇ ಹಂತದ ಕಾಮಗಾರಿಯನ್ನು ಸೀಬರ್ಡ್ ನೌಕಾನೆಲೆ ಕೈಗೊಂಡಿದೆ. ವಿಮಾನ ನಿಲ್ದಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ನಡೆಸಿದರು.
Related Articles
Advertisement
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಸಿಎಂ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನೌಕಾನೆಲೆಯು ಎರಡನೇ ಹಂತದಲ್ಲಿ ವಿಸ್ತರಣೆಗೊಳ್ಳುತ್ತಿದೆ. ಯೋಜನೆಗಾಗಿ ಭೂಮಿ ಕೊಟ್ಟವರಿಗೆ ಸೂಕ್ತ ಪರಿಹಾರ ಸಿಗಬೇಕು. ಜತೆಗೆ ಸೀಬರ್ಡ್ ಮೊದಲ ಹಂತದ ಯೋಜನೆ ಅಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು.ಸಿದ್ದರಾಮಯ್ಯ, ಮುಖ್ಯಮಂತ್ರಿ