Advertisement

ಎಲ್ಲಾ ಗಡಿಭಾಗ ಬಂದ್ ಮಾಡಿ, ವಲಸೆ ಕಾರ್ಮಿಕರಿಗೆ ತಡೆಯೊಡ್ಡಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ

09:06 AM Mar 30, 2020 | Nagendra Trasi |

ನವದೆಹಲಿ: ಎಲ್ಲಾ ಗಡಿಭಾಗವನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿಕೊಂಡಿರುವ ಕೇಂದ್ರ ಸರ್ಕಾರ, ವಲಸೆ ಕಾರ್ಮಿಕರಿಗೆ ಊರಿಗೆ ತೆರಳದಂತೆ ಸೂಚನೆ ನೀಡಿ ಊಟ ಮತ್ತು ವಸತಿ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದೆ. ಯಾರು ಲಾಕ್ ಡೌನ್ ಆದೇಶ ಉಲ್ಲಂಘಿಸಿ ಮನೆಗೆ ಹೋಗುತ್ತಾರೋ ಅವರನ್ನು 14 ದಿನಗಳ ಕ್ವಾರಂಟೈನ್ ನಲ್ಲಿ ಇಡುವಂತೆ ಕೇಂದ್ರ ಸರ್ಕಾರ ಹೇಳಿದೆ.

Advertisement

ಕೋವಿಡ್ 19 ಮಹಾಮಾರಿ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಘೋಷಿಸಿದ್ದರು. ಏತನ್ಮಧ್ಯೆ ದಿನಗೂಲಿ ನೌಕರರು ತಮ್ಮ, ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮಹಾನಗರಗಳಲ್ಲಿ ಉದ್ಯೋಗ ಮತ್ತು ಊಟೋಪಚಾರ ಸಿಗುವುದಿಲ್ಲ ಎಂಬ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಈ ನಿರ್ಧಾರಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು ಸಹ ಬಸ್ ನಿಲ್ದಾಣದಲ್ಲಿ, ಬಸ್ ಗಳಲ್ಲಿ ಸಾವಿರಾರು ಜನರು ತುಂಬಿಕೊಂಡಿದ್ದಾರೆ. ಮಾರಕ ಕೋವಿಡ್ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಡಿಭಾಗದಿಂದ ಆಗಮಿಸುವ ಬಸ್ ಗಳ ಸಂಚಾರ ನಿಷೇಧಿಸಬೇಕು. ವಲಸೆ ಕಾರ್ಮಿಕರನ್ನು 14 ದಿನಗಳ ಕ್ವಾರಂಟೈನ್ ನಲ್ಲಿ ಇಟ್ಟು ಅವರಿಗೆ ಅಗತ್ಯವಿರುವ ಆಹಾರ ಮತ್ತು ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿಕೊಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next