Advertisement

ಸೋಂಕಿತ ವ್ಯಕ್ತಿಗಳ ಮನೆ ಸೀಲ್‌ಡೌನ್‌?

06:17 AM Jun 06, 2020 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ತಡೆಗೆ ಕ್ವಾರಂಟೈನ್‌ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತಿದ್ದು, ಸೋಂಕಿತ ವ್ಯಕ್ತಿಗಳ ಮನೆಗಳನ್ನು ಸೀಲ್‌ ಡೌನ್‌ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ  ನಡೆಸಿದೆ  ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ತಮ್ಮನ್ನು ಭೇಟಿಯಾದ  ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಉಡುಪಿ, ಕಲಬುರಗಿ, ರಾಯಚೂರು, ಹಾಸನ, ಬೀದರ್‌ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಜಿಲ್ಲಾಡಳಿತದೊಂದಿಗೆ ಚರ್ಚೆ: ಮಹಾರಾಷ್ಟ್ರದಿಂದ ಉಡುಪಿಗೆ  ಆಗಮಿಸಿರುವ ನಾಗರಿಕರಲ್ಲಿ ಶೇ.90 ರಷ್ಟು ಮಂದಿಯಲ್ಲಿ ಕೋವಿಡ್‌ 19 ಪಾಸಿಟಿವ್‌ ಬಂದಿದೆ. ಈಗಾಗಲೇ ಉಡುಪಿ, ದಕ್ಷಿಣ ಕನ್ನಡ, ಮಂಗಳೂರಿಗೆ ಭೇಟಿ ನೀಡಿ ಅಲ್ಲಿನಜಿಲ್ಲಾಡಳಿತದೊಂದಿಗೆ  ಚರ್ಚೆ ನಡೆಸಿ ಹಲವು ಮಾರ್ಗದರ್ಶನ ನೀಡಲಾಗಿದೆ ಎಂದರು. ಉಡುಪಿಯಲ್ಲಿ ಕೋವಿಡ್‌ 19 ಪರೀಕ್ಷೆಗೆ ಯಾವುದೇ ರೀತಿಯಲ್ಲಿ ಪ್ರಯೋಗಾಲಯದ ಕೊರತೆ ಇಲ್ಲ.

ದಿನಕ್ಕೆ ಸಾವಿರ ಮಂದಿಗೆ ಪರೀಕ್ಷೆ ನಡೆಸುವಷ್ಟು ಸೌಲಭ್ಯ ಅಲ್ಲಿನ ಕೆಎಂಸಿ  ಆಸ್ಪತ್ರೆಯಲ್ಲಿ ಇದೆ. ಕೋವಿಡ್‌ 19 ವೈರಾಣು ಹೋಗುವುದಿಲ್ಲ. ಅದರೊಂದಿಗೆ ಇದ್ದು ನಾವು ಬದುಕುಬೇಕೆಂದರು. ಚುನಾಯಿತ  ಜನಪ್ರತಿನಿಧಿಗಳು ಹಾಗೂ ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next