Advertisement

ಸೀಲ್‌ಡೌನ್‌ ನಿಯಮ ಕಡ್ಡಾಯ ಪಾಲಿಸಿ

02:43 PM May 10, 2020 | Suhan S |

ಹಾವೇರಿ: ಕೋವಿಡ್ 19 ಪಾಸಿಟಿವ್‌ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಿರುವ ಸವಣೂರ ಪಟ್ಟಣದ ಎಸ್‌. ಎಂ. ಕೃಷ್ಣ ಬಡಾವಣೆಗೆ ಶನಿವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸೀಲ್‌ಡೌನ್‌ ಪ್ರದೇಶದ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಸಚಿವರು, ನಿಮ್ಮ ಆರೋಗ್ಯ ಕಾಳಜಿಯಿಂದ ಕೋವಿಡ್‌ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೀಲ್‌ಡೌನ್‌ ಮಾಡಲಾಗಿದೆ. ಎಲ್ಲರೂ ಸಹಕರಿಸಬೇಕು. ಸೀಲ್‌ಡೌನ್‌ ನಿಯಮಗಳನ್ನು 14 ದಿನಗಳವರೆಗೆ ಶಿಸ್ತುಬದ್ಧವಾಗಿ ನೀವು ಪಾಲಿಸಿದರೆ ತೆರವುಗೊಳಿಸಲಾಗುವುದು. ಸೀಲ್‌ಡೌನ್‌ ಅವಧಿಯಲ್ಲಿ ನಿಮಗೆ ಬೇಕಾದ ಎಲ್ಲ ಅಗತ್ಯ ವಸ್ತುಗಳನ್ನು ಸರ್ಕಾರದ ವತಿಯಿಂದ ಪೂರೈಸಲಾಗುವುದು. ಅಶಿಸ್ತಿನಿಂದ ವರ್ತಿಸಿ ಸೀಲ್‌ಡೌನ್‌ ಉಲ್ಲಂಘಿಸಿ ಸೋಂಕು ಹರಡಲು ಕಾರಣವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು. ಸೀಲ್‌ಡೌನ್‌ ಅವಧಿಯನ್ನು ಹೆಚ್ಚಿಸಲಾಗುವುದು ಎಂದರು.

ಈಗಾಗಲೇ ತಮಗೆ ಅಗತ್ಯವಾದ ದಿನಸಿಗಳನ್ನು ಉಚಿತವಾಗಿ ನೀಡಲಾಗಿದೆ. ಉಚಿತ ಹಾಲು ಸಹ ಒದಗಿಸಲಾಗಿದೆ. ನಿಮ್ಮ ಬೇಡಿಕೆಯಂತೆ ಸರ್ಕಾರದ ವತಿಯಿಂದಲೇ ಉಚಿತವಾಗಿ ತರಕಾರಿ, ಹಣ್ಣು ಸಹ ರವಿವಾರದಿಂದಲೇ ಪೂರೈಸಲಾಗುವುದು. ಸೀಲ್‌ಡೌನ್‌ ಅವಧಿವರೆಗೆ ಅಗತ್ಯವಾದ ದಿನಸಿ, ತರಕಾರಿ, ಹಾಲು ಪೂರೈಸಲು ಎಲ್ಲ ಕ್ರಮಕೈಗೊಳ್ಳಲಾಗುವುದು. ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಸಹ ನೀಡಲಾಗುವುದು. ನಿಮಗೆ ಬೇಕಾದ ನೆರವು ಒದಗಿಸಲು ನಾವು ಸಿದ್ಧರಿದ್ದೇವೆ. ನೀವೆಲ್ಲರೂ ಕೋವಿಡ್‌ ನಿಯಂತ್ರಣಕ್ಕೆ ಸೀಲ್‌ ಡೌನ್‌ ನಿಯಮ ಹಾಗೂ ಬಫರ್‌ ಜೋನ್‌ ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದರು.

ಸೀಲ್‌ಡೌನ್‌ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕ್ರಿಮಿನಾಶಕ ಸಿಂಪರಣೆ, ಶುದ್ಧ ನೀರಿನ ಪೂರೈಕೆ ಕುರಿತಂತೆ ಆದ್ಯತೆ ಮೇರೆಗೆ ಕ್ರಮಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಸವಣೂರು ತಹಶೀಲ್ದಾರ್‌ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಸೀಲ್‌ಡೌನ್‌ ಏರಿಯಾದ ವಸತಿ ನಿಲಯದಲ್ಲಿ ಆರಂಭದಲ್ಲಿ ಫೀವರ್‌ ಕ್ಲಿನಿಕ್‌ನಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಳ ಮಾಡಬೇಕು. ಮಾಸ್ಕ್, ಸ್ಯಾನಿಟೈಸರ್‌ ಹಾಗೂ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿ ದಿನದ 24 ತಾಸು ಕಾರ್ಯನಿರ್ವಹಿಸುವಂತೆ ಕ್ರಮವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು. ಸೀಲ್‌ಡೌನ್‌ ಏರಿಯಾದಲ್ಲಿ 100 ಮೀಟರ್‌ ಅಂತರದಲ್ಲಿ ಮೊದಲ ರ್‍ಯಾಂಡಮ್‌ ತಪಾಸಣೆ ಹಾಗೂ ಎರಡನೇ ಹಂತದಲ್ಲಿ 200 ಮೀಟರ್‌ನಲ್ಲಿ ರ್‍ಯಾಂಡಮ್‌ ಸ್ಯಾಂಪಲ್‌ಗ‌ಳನ್ನು ತಪಾಸಣೆಯನ್ನು ಕೈಗೊಳ್ಳಬೇಕು. ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಸೀಲ್‌ಡೌನ್‌ ಏರಿಯಾದಲ್ಲಿ ತೀವ್ರ ನಿಗಾವಹಿಸಿ ತಪಾಸಣೆ, ಮಾದರಿ ಸಂಗ್ರಹ, ಆರೋಗ್ಯದ ಮೇಲೆ ನಿಗಾ ವಹಿಸುವ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ತಾಲೂಕು ಆರೋಗ್ಯಾಧಿಕಾರಿಗಳ ತಂಡಕ್ಕೆ ಸೂಚನೆ ನೀಡಿದರು.

ಗರ್ಭಿಣಿಯರು ಸೇರಿದಂತೆ ತೀವ್ರ ಆರೋಗ್ಯ ಸಮಸ್ಯೆ ಇರುವ ಜನರನ್ನು ತಾಲೂಕು ಐಸೋಲೇಷನ್‌ ಕೇಂದ್ರದಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಬೇಕು. ಎಲ್ಲ ಸ್ವಾಬ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಬೇಕು ಎಂದು ಸೂಚನೆ ನೀಡಿದರು. ಬಳಿಕ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಐಸೋಲೇಷನ್‌ ವಾರ್ಡ್ ಗಳ ವೀಕ್ಷಣೆ ಮಾಡಿದರು. ಕೋವಿಡ್‌ ಚಿಕಿತ್ಸಾ ಸೇವೆಗೆ ತೊಡಗಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next