Advertisement

ರಾಜ್ಯದಲ್ಲೂ ಸಂಚರಿಸಲಿವೆ ಸಮುದ್ರ ವಿಮಾನಗಳು

08:25 AM Jul 14, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋ ದ್ಯಮ ಉತ್ತೇಜಿಸುವ ಜತೆಗೆ ಆರ್ಥಿಕ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಕಡಲ ತೀರಗಳು ಹಾಗೂ ಜಲಾಶಯಗಳಲ್ಲಿ ವಾಟರ್‌ ಏರೋಡ್ರೋಮ್‌ (ಸಮುದ್ರ ವಿಮಾನ) ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಮೂಲ ಸೌಕರ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Advertisement

ಬುಧವಾರ ಕರ್ನಾಟಕ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಣೆ ಕಾರ್ಯಾಗಾರದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಗರಿಕ ವಿಮಾನಯಾನ ಸಂಪರ್ಕದ ಮೂಲಕ 9 ಕಡೆ ವಾಟರ್‌ ಏರೋಡ್ರೋಮ್‌ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದರು.

ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನಮಕ್ಕಿ, ಆಲಮಟ್ಟಿ ಮತ್ತು ಹಿಡಕಲ್‌ ಜಲಾಶಯಗಳನ್ನು ವಾಟರ್‌ ಏರೋಡ್ರೋಮ್‌ ಅಭಿವೃದ್ಧಿಪಡಿಸುವ ಸ್ಥಳಗಳನ್ನಾಗಿ ಸದ್ಯಕ್ಕೆ ಗುರುತಿಸಲಾಗಿದೆ ಎಂದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಸಮಗ್ರ ನಾಗರಿಕ ವಿಮಾನಯಾನ ನೀತಿ ರೂಪಿಸು ವುದು ಅಗತ್ಯ. ರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಹೊಣೆಯನ್ನು ಪ್ರತ್ಯೇಕ ಸಂಸ್ಥೆ ಅಥವಾ ಸರಕಾರಕ್ಕೆ ವಹಿ ಸುವುದು ಸೂಕ್ತ ಎಂದರು.

ಹೆಲಿಪೋರ್ಟ್‌ಗಳ ನಿರ್ಮಾಣ

ಮಡಿಕೇರಿ, ಚಿಕ್ಕಮಗಳೂರು ಮತ್ತು ಹಂಪಿ ಯಲ್ಲಿ ಹೆಲಿಪೋರ್ಟ್‌ಗಳನ್ನು ಸ್ಥಾಪಿಸಲು ಕಾರ್ಯ ಸಾಧ್ಯತೆ ಮತ್ತು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಚಿಕ್ಕಮಗಳೂರು, ಹರಿಹರ, ಕುಶಾಲನಗರ ಮತ್ತು ಅಥಣಿಯಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪಿಸುವ ಚಿಂತನೆ ಇದೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣ ಈ ವರ್ಷಾಂತ್ಯ ದೊಳಗೆ ಉದ್ಘಾಟನೆ ಆಗಲಿದೆ. ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ರಾಜ್ಯದ ಬಗ್ಗೆ ಮೆಚ್ಚುಗೆ
ಇದಕ್ಕೂ ಮೊದಲು ಕಾರ್ಯಾಗಾರದಲ್ಲಿ ಮಾತನಾಡಿದ ಕೇಂದ್ರ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಡಿ ಅವರು, ವಿಮಾನಯಾನ ನೀತಿ ರೂಪಣೆ ಕುರಿತು ಕಾರ್ಯಾಗಾರ ಆಯೋಜಿಸಿರುವ ಮೊದಲ ರಾಜ್ಯ ಕರ್ನಾಟಕ. ಪ್ರತಿ ರಾಜ್ಯಕ್ಕೂ ಇಂಥ ವಿಮಾನಯಾನ ನೀತಿ ಅಗತ್ಯ ಇದೆ. ರಾಜ್ಯದ ವಿಮಾನಯಾನ ಯೋಜನೆಗಳಿಗೆ ಕೇಂದ್ರದ ನೆರವು ಒದಗಿಸಲಾಗುವುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಎಲ್ಲೆಲ್ಲಿ ಏರೋಡ್ರೋಮ್‌?
ಕಾಳಿ ನದಿ, ಬೈಂದೂರು, ಮಲ್ಪೆ, ಮಂಗ ಳೂರು, ತುಂಗಭದ್ರಾ, ಕೆಆರ್‌ಎಸ್‌, ಲಿಂಗನ ಮಕ್ಕಿ, ಆಲಮಟ್ಟಿ, ಹಿಡಕಲ್‌ ಜಲಾಶಯ.

Advertisement

Udayavani is now on Telegram. Click here to join our channel and stay updated with the latest news.

Next