ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅಮಾನತುಲ್ಲಾ ಖಾನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ ಎಫ್‌ಐಆರ್ ಆಧರಿಸಿ ಎಎಪಿ ನಾಯಕ ವಿರುದ್ಧ ಇಡಿ ಅಕ್ರಮ ಹಣ ವರ್ಗಾವಣೆಯ ತನಿಖೆಯನ್ನು ಆರಂಭಿಸಿದೆ.
ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಖಾನ್ ಅವರನ್ನು ಕಳೆದ ವರ್ಷ ಎಸಿಬಿ ಬಂಧಿಸಿತ್ತು ನಂತರ ಸೆಪ್ಟೆಂಬರ್‌ನಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದರು, ಇದೀಗ ಮತ್ತೆ ಜಾರಿ ನಿರ್ದೇಶನಾಲಯ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಇದನ್ನೂ ಓದಿ: Jammu and Kashmir: ಭದ್ರತಾ ಪಡೆಗಳಿಂದ ಎನ್‌ಕೌಂಟರ್… ಇಬ್ಬರು ಲಷ್ಕರ್ ಉಗ್ರರು ಹತ