Advertisement

TMC ಜತೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ:ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ

04:55 PM Feb 02, 2024 | Team Udayavani |

ಕೋಲ್ಕತಾ : ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿಯೊಂದಿಗೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ವ್ಯವಸ್ಥೆಗಳನ್ನು ಚರ್ಚಿಸುತ್ತಿದೆ ಮತ್ತು ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

Advertisement

ರಾತ್ರಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷದ ‘ಡಿಜಿಟಲ್ ಮೀಡಿಯಾ ವಾರಿಯರ್ಸ್’ ಜತೆ ಸಂವಾದ ನಡೆಸುತ್ತಿದ್ದಾಗ ರಾಹುಲ್ ಹೇಳಿಕೆ ನೀಡಿದ್ದಾರೆ.

ಟಿಎಂಸಿ ನಾಯಕಿ, ಸಿಎಂ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಒಂದೇ ಒಂದು ಲೋಕಸಭಾ ಸ್ಥಾನವನ್ನು ಬಿಟ್ಟುಕೊಡಲು ಇಚ್ಛಿಸದಿದ್ದರೂ ಅವರಿಗೆ ಏಕೆ ಪ್ರಾಮುಖ್ಯತೆ ನೀಡುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗಾಂಧಿ, “ಮಮತಾ-ಜಿ ಹಾಗೆ ಹೇಳಿಲ್ಲ ಅಥವಾ ಕಾಂಗ್ರೆಸ್ ಮೈತ್ರಿಯಿಂದ ಹೊರಬಂದಿಲ್ಲ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next