Advertisement

ಪ್ರವೀಣ್‌ ನೆಟ್ಟಾರು ಹತ್ಯೆ:ಪುತ್ತೂರು ಸುಳ್ಯ ಹಾಗೂ ಕಡಬ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ

11:27 AM Jul 27, 2022 | Team Udayavani |

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆಯಿಂದಾಗಿ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪುತ್ತೂರು, ಸುಳ್ಯ, ಕಡಬದಲ್ಲಿ ಬುಧವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Advertisement

ಪುತ್ತೂರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗಿರೀಶ್ ನಂದನ್ ಬುಧವಾರ ಆದೇಶ ಹೊರಡಿಸಿದ್ದು, ಜುಲೈ 27 ರಂದು ಬೆಳಿಗ್ಗೆ 6 ರಿಂದ ಜುಲೈ 28 ರ ಮಧ್ಯರಾತ್ರಿಯವರೆಗೆ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.

ಬಂಟ್ವಾಳದ ಬಿಸಿ ರೋಡ್‌ನಲ್ಲಿ ಹಿಂದೂ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲು ಮನವಿ ಮಾಡಿದ್ದಾರೆ. ಇನ್ಸ್‌ಪೆಕ್ಟರ್‌  ವಿವೇಕಾನಂದ , ಪಿಎಸ್‌ಐ ಅವಿನಾಶ್‌ ನೇತೃತ್ವದಲ್ಲಿ ಬಿಗಿಬಂದೋಬಸ್ತ್‌ ಮಾಡಲಾಗಿದೆ.

ಇದನ್ನೂ ಓದಿ: ಪ್ರವೀಣ್‌ ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಕುಟುಂಬಸ್ಥರಿಗೆ ಪಾರ್ಥೀವ ಶರೀರ ಹಸ್ತಾಂತರ

Advertisement

ಇದಕ್ಕೂ ಮುನ್ನ ಜಿಲ್ಲೆಯ ಕಡಬ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಬುಧವಾರ ಬಂದ್‌ಗೆ ಕರೆ ನೀಡಿತ್ತು.

ಬಂದ್ ಕರೆಗೆ ಸ್ಪಂದಿಸಿ ಇಂದು ಅಂಗಡಿ ಮುಂಗಟ್ಟುಗಳು ಹಾಗೂ ಇತರೆ ಸಂಸ್ಥೆಗಳು ವ್ಯಾಪಾರ ವಹಿವಾಟು ನಡೆಸಲು ಮುಚ್ಚಿದ್ದವು. ಪುತ್ತೂರಿನ ಲೈನ್‌ ಜಂಕ್ಷನ್‌ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ ನಡೆದಿದೆ.

ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿಯಾಗಿರುವ ಪ್ರವೀಣ್‌ ಅವರು ಎಂದಿನಂತೆ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ತನ್ನ ಚಿಕನ್‌ ಸೆಂಟರ್‌ ಅನ್ನು ಮುಚ್ಚುವ ತಯಾರಿಯಲ್ಲಿದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next